ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಭಷ್ಟಾಚಾರ ವಿರುದ್ಧ ಕಾಂಗ್ರೆಸ್ ಆಕ್ರೋಶ

ಸುದ್ದಿ ಕಣಜ.ಕಾಂ | CITY | POLITICAL NEWS
ಶಿವಮೊಗ್ಗ: ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ದುರಾಡಳಿತವನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಪಾಲಿಕೆ ಕಚೇರಿ ಎದುರು ಗುರುವಾರ ಪ್ರತಿಭಟನೆ ಮಾಡಲಾಯಿತು. ಪಾಲಿಕೆಯ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು.
ಆಸ್ತಿ ತೆರಿಗೆ ಮತ್ತು ಖಾತೆ ಬದಲಾವಣೆಗಾಗಿ ಬಿಜೆಪಿಯ ಸದಸ್ಯರು ಅಕ್ರಮ ನಡೆಸುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಆರೋಪಿಸಿದ್ದಾರೆ.

ಪಾಲಿಕೆಯಲ್ಲಿ ಜನರ ನಿರ್ಲಕ್ಷ್ಯ

ವಿವಿಧ ಕೆಲಸಗಳಿಗಾಗಿ ಸಾರ್ವಜನಿಕರು ನೇರವಾಗಿ ಪಾಲಿಕೆಗೆ ಹೋದರೆ ಅಲ್ಲಿ ಯಾರೂ ತಲೆಕೆಡಿಸಿಕೊಳ್ಳುತ್ತಿಲ್ಲ. ನೌಕರರು ನಿರ್ಲಕ್ಷಿಸುತ್ತಿದ್ದಾರೆ. ಲಂಚ ನೀಡದ ಹೊರತು ಕೆಲಸಗಳು ಆಗುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಆಶ್ರಯ ಯೋಜನೆಯಡಿ ಮನೆಗಳ ನಿರ್ಮಾಣ ಕೂಡ ನನೆಗುದಿಗೆ ಬಿದ್ದಿದೆ. ಸಚಿವರು ನೀಡಿದ ಭರವಸೆಗಳು ಸುಳ್ಳಾಗಿವೆ. ಜೊತೆಗೆ, ಸ್ಮಾರ್ಟ್ ಸಿಟಿ ಯೋಜನೆ ಅಡಿ ಮಾಡುತ್ತಿರುವ ಕಾಮಗಾರಿಗಳಲ್ಲೂ ಗುಣಮಟ್ಟದ ಕೊರತೆ ಎದ್ದು ಕಾಣುತ್ತಿದೆ ಎಂದು ಟೀಕಿಸಿದ್ದಾರೆ.
ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಪಾಲಿಕೆ ವಿಪಕ್ಷ ನಾಯಕಿ ಯಮುನಾ ರಂಗೇಗೌಡ, ಸದಸ್ಯರಾದ ಎಚ್.ಸಿ.ಯೋಗೇಶ್, ಬಿ.ಎ.ರಮೇಶ್ ಹೆಗ್ಡೆ, ರೇಖಾ ರಂಗನಾಥ್, ಮಹೇಖ್ ಷರೀಫ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

https://www.suddikanaja.com/2021/08/25/strike-before-shivamogga-city-corporation/