ಭದ್ರಾವತಿಯಲ್ಲಿ ಮರಕ್ಕೆ ಕಾರು ಡಿಕ್ಕಿ, ವ್ಯಕ್ತಿ ಸಾವು

 

ಸುದ್ದಿ ಕಣಜ.ಕಾಂ | TALUK | ACCIDENT
ಭದ್ರಾವತಿ: ಒಂದು ಕಾರು ಬಿ.ಎಚ್. ರಸ್ತೆಯಲ್ಲಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಎದುರುಗಡೆಯ ಮರಕ್ಕೆ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ. 

ಹುತ್ತ ಕಾಲೋನಿಯ ಶರತ್ ಮೃತಪಟ್ಟಿದ್ದಾರೆ. ಕಾರಿನಲ್ಲಿ ಶರತ್, ವಿಷ್ಣು, ದೀಕ್ಷಿತ್ ಅವರು ಪ್ರಯಾಣಿಸುತ್ತಿದ್ದರು. ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಅಪಘಾತ ಸಂಭವಿಸಿದೆ. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.