ಶಿವಮೊಗ್ಗದಲ್ಲಿ ಪೊಲೀಸರ ಮೇಲೆಯೇ ಹಲ್ಲೆ

ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ನೈಟ್ ಕರ್ಫ್ಯೂ (night curfew) ನಿಯಮ ಉಲ್ಲಂಘಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಅವಾಚ್ಯವಾಗಿ ನಿಂದಿಸಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಸಾಗರದ ಶಿವಕುಮಾರ್ ಎಂಬಾತ ದೊಡ್ಡಪೇಟೆಯ ಪೇದೆಗಳಾದ ಆನಂದ್ ಮತ್ತು ಮಂಜುನಾಥ್ ನಾಯ್ಕ ಎಂಬುವವರ ಮೇಲೆ ಹಲ್ಲೆ ಮಾಡಿದ್ದಾನೆ. ಅದರಲ್ಲಿ ಸಣ್ಣಪುಟ್ಟ ಗಾಯಗಳಾದ ಆನಂದ್ ಅವರನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ನೈಟ್ ಕರ್ಫ್ಯೂ ನಿಯಮ ಉಲ್ಲಂಘನೆ ಮತ್ತು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಶಿವಕುಮಾರ್ ವಿರುದ್ಧ ದೊಡ್ಡಪೇಟೆ ಠಾಣೆ (doddapete police station)ಯಲ್ಲಿ ಪ್ರಕರಣ ದಾಖಲಾಗಿದೆ.