ಎಸ್ಸೆಸ್ಸೆಲ್ಸಿ ಪಾಸ್ ಆದವರಿಗೆ ಉದ್ಯೋಗ, ಈಗಲೇ Bare Foot Technician ಹುದ್ದೆಗೆ ಅರ್ಜಿ ಸಲ್ಲಿಸಿ

ಸುದ್ದಿ ಕಣಜ.ಕಾಂ | KARNATAKA | JOB JUNCTION
ಬೆಂಗಳೂರು: ಎಸ್ಸೆಸ್ಸೆಲ್ಸಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಉದ್ಯೋಗ ಅವಕಾಶವಿದೆ. ಅರ್ಹ ಮತ್ತು ಆಸಕ್ತರು ಜನವರಿ 20ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹಾಸನ ಜಿಲ್ಲಾ ಪಂಚಾಯಿತಿಯು ಎಂ ನರೇಗಾ ಯೋಜನೆ ಅಡಿಯಲ್ಲಿ ಬೇರ್ ಫೂಟ್ ಟೆಕ್ನಿಷಿಯನ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದೆ. ಒಟ್ಟು 16 ಹುದ್ದೆಗಳು ಖಾಲಿಯಿದ್ದು, ಕನಿಷ್ಠ 18 ವರ್ಷ ಹಾಗೂ ಗರಿಷ್ಠ 45 ವರ್ಷದೊಳಗಿನವರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ.

READ | ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ನೇಮಕಾತಿಗಾಗಿ ಅರ್ಜಿ, ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭ, ಎಷ್ಟು ಹುದ್ದೆ ಖಾಲಿ?

ಯಾವ ದಾಖಲೆಗಳನ್ನು ಸಲ್ಲಿಸಬೇಕು?
ಹಾಸನ ಜಿಲ್ಲಾ ಪಂಚಾಯಿತಿಯ ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಈ ವೇಳೆ ಪಾಸ್ ಪೋರ್ಟ್ ಸೈಟ್ ಚಿತ್ರ (ಜೆಪಿಇಜಿ) ಹಾಗೂ ಪಿಡಿಎಫ್ ಫಾರ್ಮೆಟ್ ನಲ್ಲಿ ಎಸ್ಸೆಸ್ಸೆಲ್ಸಿ ಸರ್ಟಿಪಿಕೇಟ್, ನರೇಗಾ ಜಾಬಬ್ ಕಾರ್ಡ್, ಆಧಾರ್ ಕಾರ್ಡ್, ಎಕ್ಸ್ ಪೀರಿಯನ್ಸ್ ಸರ್ಟಿಫಿಕೇಟ್, ಕಂಪ್ಯೂಟರ್ ಸರ್ಟಿಫಿಕೇಟ್ ಗಳನ್ನು ಅರ್ಜಿಯೊಂದಿಗೆ ಸಲ್ಲಿಸತಕ್ಕದ್ದು.
ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳು ನರೇಗಾ ಕಾಮಗಾರಿಗಳು ನಡೆಯುವ ಸ್ಥಳಗಳಿಗೆ ಭೇಟಿ ನಿಡಿ ಮೇಲ್ವಿಚಾರಣೆ ಮಾಡಬೇಕಾಗುತ್ತದೆ.

CLICK HERE TO APPLY

JOBS IN SHIVAMOGGA | ಶಿವಮೊಗ್ಗ ದಲ್ಲಿ ಉದ್ಯೋಗ ಅವಕಾಶ, ಸ್ಥಳೀಯರಿಗೆ ಆದ್ಯತೆ, ವಯೋಮಿತಿ ಇಲ್ಲ, ಈಗಲೇ ಅರ್ಜಿ ಸಲ್ಲಿಸಿ