ಶಿವಮೊಗ್ಗದ ಈ‌ ಕಾಲೇಜುಗಳ ಸುತ್ತ ಜ. 17ರಿಂದ 24ರ ವರೆಗೆ ನಿಷೇದಾಜ್ಞೆ ಜಾರಿ

ಸುದ್ದಿ ಕಣಜ.ಕಾಂ | DISTRICT | EDUCATION CORNER
ಶಿವಮೊಗ್ಗ: ಜನವರಿ 17ರಿಂದ 24ರ ವರೆಗೆ ವಾಣಿಜ್ಯ ಪರೀಕ್ಷೆಗಳನ್ನು ಆಯೋಜಿಸಿದ್ದು, ಈ ಅವಧಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ.
ಪರೀಕ್ಷೆಗಳನ್ನು ಪಾರದರ್ಶಕವಾಗಿ ಯಾವುದೇ ಅವ್ಯವಹಾರ, ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಭದ್ರತೆ ಕೈಗೊಳ್ಳಲಾಗಿದೆ.
ಕೇಂದ್ರಗಳ ಸುತ್ತ 200 ಮೀಟರ್ ಪ್ರದೇಶದ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಆದೇಶ ನೀಡಿದ್ದಾರೆ.

READ | ಇನ್ನೂರು ದಾಟಿದ ಕೊರೊನಾ ಸೋಂಕು, ಶಿವಮೊಗ್ಗ, ಭದ್ರಾವತಿಯಲ್ಲಿ ಅತ್ಯಧಿಕ ಕೇಸ್

ಎಲ್ಲೆಲ್ಲಿ ನಿಷೇಧಾಜ್ಞೆ?
ಬಿ.ಎಚ್.ರಸ್ತೆಯ ಸರ್ಕಾರಿ ಪ್ರೌಢ ಶಾಲೆ (ಬಾಲಿಕ), ಭದ್ರಾವತಿಯ ಟಿ.ಕೆ.ರಸ್ತೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜ.17 ರಿಂದ 19 ರವರೆಗೆ ಮತ್ತು ಶಿವಮೊಗ್ಗದ ಬಿ.ಎಚ್.ರಸ್ತೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಜ. 20 ರಿಂದ 24 ರವರೆಗೆ ಆಯಾ ದಿನಾಂಕಗಳಂದು ಬೆಳಗ್ಗೆ 9ರಿಂದ ಸಂಜೆ 4ರ ವರೆಗೆ ನಿಜೇಧಾಜ್ಞೆ ಜಾರಿಯಾಗಿದ್ದು, ನಿಷೇಧಿತ ಪರೀಕ್ಷಾ ಕೇಂದ್ರದ ಸುತ್ತಮುತ್ತಲ ಪ್ರದೇಶದಲ್ಲಿ ಐದು ಮತ್ತು ಐದಕ್ಕಿಂತ ಹೆಚ್ಚಿನ ಜನ ಸೇರುವುದನ್ನು ನಿಷೇಧಿಸಲಾಗಿದೆ.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲ ಟೈಪಿಂಗ್, ಜೆರಾಕ್ಸ್ ಹಾಗೂ ಫ್ಯಾಕ್ಸ್ ಅಂಗಡಿಗಳು ತೆರೆದಿರುವುದನ್ನು ಪ್ರತಿಬಂಧಿಸಲಾಗಿದೆ. ಅಲ್ಲದೆ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ. ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಗೆ ಸಂಬಂಧಪಟ್ಟ ಸಿಬ್ಬಂದಿ/ ಅಧಿಕಾರಿಗಳನ್ನು ಹೊರತುಪಡಿಸಿ ಇತರೆ ವ್ಯಕ್ತಿಗಳು ಪರೀಕ್ಷಾ ಕೇಂದ್ರ ಪ್ರವೇಶಿಸುವಂತಿಲ್ಲ. ಕೇಂದ್ರದ ಮುಖ್ಯದ್ವಾರದಲ್ಲಿ ಕಡ್ಡಾಯವಾಗಿ ಆರಕ್ಷಕ ಸಿಬ್ಬಂದಿ ನಿಯೋಜಿಸಿ, ಅನಗತ್ಯ ವ್ಯಕ್ತಿಗಳ ಚಲನವಲನಗಳನ್ನು ನಿಯಂತ್ರಿಸಲು ಸಂಬಂಧಪಟ್ಟ ಠಾಣಾ ಮುಖ್ಯಸ್ಥರಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.

https://www.suddikanaja.com/2021/08/23/school-and-college-re-open-at-shivamogga/