ಸುದ್ದಿ ಕಣಜ.ಕಾಂ | DISTRICT | HEALTH NEWS
ತೀರ್ಥಹಳ್ಳಿ: ತಾಲೂಕಿನ ಕೂಡಿಗೆ ಗ್ರಾಮದ ಮಹಿಳೆಯೊಬ್ಬರಲ್ಲಿ ಕೆಎಫ್‍ಡಿ (ಮಂಗನ ಕಾಯಿಲೆ) ಸೋಂಕು ಪತ್ತೆಯಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಗುಣಮುಖರಾಗುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳು ಸ್ಪಷ್ಟಪಡಿಸಿವೆ.
ಮಹಿಳೆಯಲ್ಲಿ ಜ್ವರ ಕಂಡು ಬಂದ ಹಿನ್ನೆಲೆಯಲ್ಲಿ ಪರೀಕ್ಷೆಗೆ ಒಳಪಡಿಸಿದ್ದು, ಕೆ.ಎಫ್.ಡಿ ಪಾಸಿಟಿವ್ ಇರುವುದು ದೃಢಪಟ್ಟಿದೆ. ಇದರಿಂದಾಗಿ ಸಹಜವಾಗಿ ಜನರು ಗಾಬರಿಯಲ್ಲಿದ್ದಾರೆ.