ಸುದ್ದಿ ಕಣಜ.ಕಾಂ | KARNATAKA | POLICE STATION UPGRADE
ಶಿವಮೊಗ್ಗ: ಜಿಲ್ಲೆಯ ನಾಲ್ಕು ಪೊಲೀಸ್ ಠಾಣೆ ಸೇರಿ ರಾಜ್ಯದ ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೇರಿಸಲು 500 ಕೋಟಿ ರೂಪಾಯಿಯನ್ನು ಮೀಸಲು ಇಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ನಗರದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಠಾಣೆಗಳನ್ನು ಮೇಲ್ದರ್ಜೆಗರಿಸುವ ಮೂಲಕ ಕಾನೂನು ಸುವ್ಯವಸ್ಥೆ ಸುಧಾರಣೆಗೆ ಇನ್ನಷ್ಟು ಪ್ರಯತ್ನ ಮಾಲಾಗುತ್ತಿದೆ. ಜೊತೆಗೆ, ಕೆಲವು ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೇರಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಆ ನಿಟ್ಟಿನಲ್ಲಿ ಯೋಜನೆಯೂ ಸಿದ್ಧವಾಗಿದೆ ಎಂದರು. ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಅಪರಾಧಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ ಎಂದು ತಿಳಿಸಿದರು. ಎಡಿಜಿಪಿ ಸತೀಶ್, ಎಸ್ಪಿ ಲಕ್ಷ್ಮೀಪ್ರಸಾದ್ ಉಪಸ್ಥಿತರಿದ್ದರು.