ಸುದ್ದಿ ಕಣಜ.ಕಾಂ | TALUK | CRIME NEWS
ಶಿವಮೊಗ್ಗ: ತಾಲೂಕಿನ ಗಾಜನೂರು ಅಗ್ರಹಾರ ಏರಿಯ ಮೇಲೆ ಇತ್ತೀಚೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ.
ಗಾಜನೂರು ಇಂದಿರಾನಗರದ ಮಣಿ (25) ಮೃತರು. ಲಕ್ಷ್ಮಮ್ಮ ಎಂಬುವವರ ಕಾಲಿಗೆ ಗಾಯಗಳಾಗಿವೆ. ಗಾಜನೂರು ಅಗ್ರಹಾರ ಕ್ಯಾಂಪ್ ನಿಂದ ಇಂದಿರಾನಗರಕ್ಕೆ ಮುರುಗೇಶ್ ಎಂಬುವವರ ಜತೆಯಲ್ಲಿ ಬೈಕಿನಲ್ಲಿ ಹೋಗುತ್ತಿದ್ದಾಗ ಎದುರುಗಡೆ ಹಸು ಬಂದಿದ್ದು, ಅದನ್ನು ತಪ್ಪಿಸಲು ಹೋಗಿ ರಸ್ತೆ ಪಕ್ಕದಿಂದ ನಡೆದುಕೊಂಡು ಹೋಗುತ್ತಿದ್ದ ಲಕ್ಷ್ಮಮ್ಮ ಅವರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ಹಿಂದೆ ಕುಳಿತಿದ್ದ ಮಣಿ ಅವರು ಕೆಳಗೆ ಬಿದ್ದ ಪರಿಣಾಮ ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವ ಉಂಟಾಗಿದೆ. ಆಸ್ಪತ್ರೆಗೆ ಕರೆದುಕೊಂಡು ಬರುವ ಹೊತ್ತಿಗೆ ಮಣಿ ಮೃತಪಟ್ಟಿದ್ದಾರೆ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.