ಸುದ್ದಿ ಕಣಜ.ಕಾಂ | DISTRICT | SPORTS NEWS
ಶಿವಮೊಗ್ಗ: ಕೇಂದ್ರ ಪುರಸ್ಕೃತ ಖೇಲೋ ಇಂಡಿಯಾ ಯೋಜನೆ ಅಡಿ ತಳಮಟ್ಟದಲ್ಲಿ ಪರಿಣಾಮಕಾರಿಯಾದ ಕ್ರೀಡಾ ತರಬೇತಿ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ನಿರ್ಧರಿಸಿದೆ. ನಗರದ ನೆಹರೂ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್ ಕ್ರೀಡೆಗೆ ಸಂಬಂಧಿಸಿದಂತೆ ಖೇಲೋ ಇಂಡಿಯಾ ಕೇಂದ್ರವನ್ನು ಸ್ಥಾಪಿಸಲು ಅಂತರಾಷ್ಟ್ರೀಯ, ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಪದಕ ಗಳಿಸಿದ ಆಸಕ್ತ ಅಥ್ಲೆಟಿಕ್ಸ್ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸಂಬಂಧಿಸಿದ ದಾಖಲೆಗಳನ್ನು ನೋಟರಿ ಮಾಡಿಸಿ ಫೆಬ್ರವರಿ 4ರೊಳಗಾಗಿ ಸಲ್ಲಿಸುವಂತೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08182-223328ನ್ನು ಸಂಪರ್ಕಿಸಬಹುದಾಗಿದೆ.