ಶಿವಮೊಗ್ಗದಲ್ಲಿ ಮಕ್ಕಳಿಗೂ ಕೋವಿಡ್ ಲಸಿಕೆ, ಎಲ್ಲಿ, ಯಾವಾಗ ಲಭ್ಯ?

 

 

ಸುದ್ದಿ ಕಣಜ.ಕಾಂ | DISTRICT | HEALTH NEWS
ಶಿವಮೊಗ್ಗ: ಸಂಭಾವ್ಯ ಕೋವಿಡ್ ಮೂರನೇ ಅಲೆ ಈಗಾಗಲೇ ದೇಶದಲ್ಲಿ ಆರಂಭವಾಗಿದ್ದು, ರೂಪಾಂತರಿ ಓಮಿಕ್ರಾನ್ ವೈರಸ್ ಸೋಂಕು ಕಾಡಲಾರಂಭಿಸಿದೆ. ರಾಜ್ಯದಲ್ಲೂ ಹಲವು ಪ್ರಕರಣಗಳು ಈಗಾಗಲೇ ಪತ್ತೆಯಾಗಿವೆ.
ಆರೋಗ್ಯ ಇಲಾಖೆ ಕೊರೊನಾ ವೈರಸ್ ಸೋಂಕು ತಡೆಯುವ ಉದ್ದೇಶದಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಪ್ರಕ್ರಿಯೆ ನಡೆಯುತ್ತಿದೆ. ಈಗ ಮಕ್ಕಳಿಗೂ ಲಸಿಕೆ ನೀಡಲು ಮುಂದಾಗಿದ್ದು, ಶಿವಮೊಗ್ಗದಲ್ಲಿ ಜನವರಿ 3ರಂದು ಲಸಿಕೆ ನೀಡಲಾಗುತ್ತಿದೆ.

ಲಸಿಕಾಕರಣ ಕಾರ್ಯಕ್ರಮಕ್ಕೆ ಚಾಲನೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಸರ್ಕಾರಿ ಪದವಿ ಪೂರ್ವ ಕಾಲೇಜು, ಸೈನ್ಸ್ ಮೈದಾನ ಸಂಯುಕ್ತಾಶ್ರಯದಲ್ಲಿ ಜನವರಿ 3ರ ಬೆಳಗ್ಗೆ 10 ಗಂಟೆಗೆ ನಗರದ ಸೈನ್ಸ್ ಮೈದಾನದಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್ 19 ಲಸಿಕಾಕರಣ ಚಾಲನಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸದುಪಯೋಗ ಪಡೆಯುವಂತೆ ಆರೋಗ್ಯ ಇಲಾಖೆ ತಿಳಿಸಿದೆ.

https://www.suddikanaja.com/2021/05/16/helpline-to-who-loss-there-parents-in-covid-pandemic/

error: Content is protected !!