ಶಿವಮೊಗ್ಗದಲ್ಲಿ ಜಾತ್ರೆ, ಸಂತೆ ನಿಷೇಧ, ಗ್ರಂಥಾಲಯ ಬಂದ್

 

 

ಸುದ್ದಿ ಕಣಜ.ಕಾಂ | DISTRICT | WEEKEND CURFEW
ಶಿವಮೊಗ್ಗ: ಕೋವಿಡ್-19 ಸೋಂಕು ಹರಡುವುದನ್ನು ತಡೆಯಲು ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಹೇರಿದೆ. ಪರಿಣಾಮ ಜಿಲ್ಲೆಯಲ್ಲಿ ಹಲವು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುವ ಎಲ್ಲ ಜಾತ್ರೆ ಹಾಗೂ ಸಂತೆಯನ್ನು ಮುಂದಿನ ಆದೇಶದವರೆಗೆ ನಿಷೇಧಿಸಲಾಗಿದೆ. ಈ ಸಂಬಂಧ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಹಾನಗರಪಾಲಿಕೆ ಆಯುಕ್ತ ಚಿದಾನಂದ್ ವಟಾರೆ ತಿಳಿಸಿದ್ದಾರೆ.

ಗ್ರಂಥಾಲಯ ಸೇವೆ ಅಲಭ್ಯ
ಸರ್ಕಾರದ ಆದೇಶದನ್ವಯ ಜ.5 ರಿಂದ 19ರ ವರೆಗೆ ವಾರಾಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ಶನಿವಾರ ಹಾಗೂ ಭಾನುವಾರ ಗ್ರಂಥಾಲಯಗಳ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಮುಂದಿನ ಆದೇಶದವರೆಗೆ ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಸಾರ್ವಜನಿಕರಿಗೆ ಗ್ರಂಥಾಲಯ ಸೇವೆಯನ್ನು ಒದಗಿಸಲಾಗುವುದು ಎಂದು ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ತಿಳಿಸಿದ್ದಾರೆ.

error: Content is protected !!