ಮಾಜಿ ಸಿಎಂ ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆ

 

 

ಸುದ್ದಿ ಕಣಜ.ಕಾಂ | KARNATAKA | CRIME NEWS
ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಶುಕ್ರವಾರ ಬೆಳಗ್ಗೆ ತಮ್ಮ ಬೆಂಗಳೂರಿನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಯಡಿಯೂರಪ್ಪ ಅವರ ಪುತ್ರಿಯಾದ ಪದ್ಮಾವತಿ ಅವರ ಪುತ್ರಿ ಸೌಂದರ್ಯ (30) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದರು. ಬೆಳಗ್ಗೆ ಪತಿ ಕೆಲಸಕ್ಕೆ ಹೋದಾಗ ಬಾಗಿಲು ಮುಚ್ಚಿಕೊಂಡು ನೇಣು ಬಿಗಿದುಕೊಂಡಿದ್ದಾರೆ. ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ.

error: Content is protected !!