ಶಿವಮೊಗ್ಗದಲ್ಲಿ ಬೂಸ್ಟರ್ ಡೋಸ್ ಯಾವಾಗಿಂದ ಲಭ್ಯ, ಯಾರೆಲ್ಲ ಪಡೆಯಬಹುದು?

 

 

ಸುದ್ದಿ ಕಣಜ.ಕಾಂ | DISTRICT | BOOSTER DOSE
ಶಿವಮೊಗ್ಗ: 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ (booster dose) ನೀಡುವ ಪ್ರಕ್ರಿಯೆಗೆ ಜನವರಿ 10ರಿಂದ ಜಿಲ್ಲೆಯಾದ್ಯಂತ ಚಾಲನೆ ನೀಡಲಾಗುವುದು ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ನಗರದ ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಈಗಾಗಲೇ ಎರಡನೇ ಡೋಸ್ ಪಡೆದು 90 ದಿನ ಕಳೆದಿರುವವರು ಬೂಸ್ಟರ್ ಡೋಸ್ ಪಡೆಯಬಹುದಾಗಿದೆ. ಬೂಸ್ಟರ್ ಡೋಸ್ ಪಡೆಯಲು ಜಿಲ್ಲೆಯಲ್ಲಿ ಒಟ್ಟು 2 ಲಕ್ಷ ಫಲಾನುಭವಿಗಳಿದ್ದರೆ. ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ನೀಡಲು ವ್ಯವಸ್ಥೆ ಮಾಡಲಾಗುವುದು ಎಂದರು.

ಈಗಾಗಲೇ 15-18 ವರ್ಷದೊಳಗಿನವರಿಗೆ ಲಸಿಕೆ ನೀಡುವ ಕಾರ್ಯ ನಡೆಯುತ್ತಿದ್ದು, ಜನವರಿ 12ರ ಒಳಗಾಗಿ ಎಲ್ಲ 83,831 ಮಂದಿಗೆ ಲಸಿಕೆ ನೀಡುವ ಕಾರ್ಯ ಪೂರ್ಣಗೊಳಿಸಬೇಕು ಎಂದರು.
ಸಭೆಯಲ್ಲಿ ಡಿಸಿ ಕೆ.ಬಿ. ಶಿವಕುಮಾರ್, ಶಾಸಕರಾದ ಕೆ.ಬಿ.ಅಶೋಕ್ ನಾಯ್ಕ್, ಎಸ್.ರುದ್ರೇಗೌಡ, ಡಿ.ಎಸ್. ಅರುಣ್, ಜಿಲ್ಲಾ ಪಂಚಾಯಿತಿ ಸಿಇಓ ಎಂ.ಎಲ್. ವೈಶಾಲಿ, ಎಸ್.ಪಿ. ಲಕ್ಷ್ಮೀ ಪ್ರಸಾದ್ ಉಪಸ್ಥಿತರಿದ್ದರು.

https://www.suddikanaja.com/2022/01/03/the-government-is-giving-covaxin-to-15-18-year-old-childrens-all-the-preparations-have-been-made-in-shimoga/

error: Content is protected !!