ಸುದ್ದಿ ಕಣಜ.ಕಾಂ | DISTRICT | HEALTH NEWS
ಶಿವಮೊಗ್ಗ: ಗ್ರಾಮೀಣ ಮಟ್ಟದಲ್ಲಿ ಈಗಾಗಲೇ ರಚಿಸಲಾಗಿರುವ ಟಾಸ್ಕ್ ಫೋರ್ಸ್ (task force) ಮತ್ತೆ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa) ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಗ್ರಾಮ ಪಂಚಾಯಿತಿ (Grama panchayat) ಅಧ್ಯಕ್ಷರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗಿದ್ದು, ಅದರಲ್ಲಿರುವ ಅಧಿಕಾರಿಗಳು ಸಕ್ರಿಯವಾಗಿ ಸಭೆಗಳಲ್ಲಿ ಭಾಗವಹಿಸುವುದು ಸೇರಿದಂತೆ ಕರ್ತವ್ಯ ನಿರ್ವಹಿಸಬೇಕು. ಈ ಕುರಿತು ಯಾವುದೇ ದೂರುಗಳು ಬರಬಾರದು ಎಂದು ಹೇಳಿದರು.
ಸರಕಾರದ ಮಾರ್ಗಸೂಚಿ (guidelines) ಪ್ರಕಾರ ಕೋವಿಡ್ ನಿಯಂತ್ರಣಕ್ಕೆ ಎಲ್ಲ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಜನರು ಗೊಂದಲಕ್ಕೆ ಒಳಗಾಗುವ ಅಗತ್ಯ ಇಲ್ಲ ಎಂದರು.
ಕೋವಿಡ್ ಎದುರಿಸಲು ಜಿಲ್ಲಾಡಳಿತ ಎಲ್ಲ ಸಿದ್ಧತೆಗಳನ್ನು ಕೈಗೊಂಡಿದೆ. ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಲಾಗಿದೆ. ತಾಲೂಕುಗಳಲ್ಲಿ ಸೂಕ್ತ ಬೆಡ್ (bed) ವ್ಯವಸ್ಥೆ, ಆಕ್ಸಿಜನ್ (oxygen) ಲಭ್ಯತೆಯನ್ನು ಖಾತ್ರಿಪಡಿಸಲು ಸೂಚಿಸಲಾಗಿದೆ. ಮುಂಜಾಗರೂಕತಾ ಕ್ರಮವಾಗಿ ಜನರು ಗುಂಪು ಸೇರುವುದನ್ನು ತಪ್ಪಿಸಲು ವಾರಾಂತ್ಯ ಕರ್ಫ್ಯೂ (weekend curfew) ವಿಧಿಸಲಾಗಿದೆ ಎಂದರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ (KB Shivakumar) ಮಾತನಾಡಿ, ಕೋವಿಡ್ ಮೂರನೇ ಅಲೆ (covid 3rd wave) ಯನ್ನು ಎದುರಿಸಲು ಎಲ್ಲ ಸಿದ್ಧತೆಗಳನ್ನು ಮಾಡಲಾಗಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ 1,382 ಬೆಡ್ ಗಳು ಲಭ್ಯವಿದ್ದು, 640 ಬೆಡ್ ಗಳನ್ನೂ ಕೋವಿಡ್ ಗಾಗಿ ಮೀಸಲಿರಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಒಟ್ಟು 94,000 ಕೆ.ಜಿ. ಆಕ್ಸಿಜನ್ ಸಂಗ್ರಹಣಾ ಸಾಮಥ್ರ್ಯದ ವ್ಯವಸ್ಥೆ ಮಾಡಲಾಗಿದೆ. ಕೋವಿಡ್ ಸಮರ್ಪಕ ನಿರ್ವಹಣೆಗೆ ವಾರ್ ರೂಮ್ (war room) ಆರಂಭಿಸಲಾಗಿದ್ದು, ಎಲ್ಲ ಆಸ್ಪತ್ರೆಗಳಲ್ಲಿ ವೈದ್ಯಾಧಿಕಾರಿಗಳು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸಜ್ಜುಗೊಳಿಸಲಾಗಿದೆ ಎಂದರು.
ನರ್ಸ್(nurse)ಗಳ ಕೊರತೆಯನ್ನು ನೀಗಿಸಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಒಟ್ಟು ಶೇ.97.67 ಜನರು ಪ್ರಥಮ ಡೋಸ್ (first dose) ಪಡೆದಿದ್ದು, ಶೇ.80 ಜನರು ಎರಡನೇ ಡೋಸ್ (second dose) ಪಡೆದಿದ್ದಾರೆ ಎಂದು ಹೇಳಿದರು.
ಶಾಸಕರಾದ ಕೆ.ಬಿ.ಅಶೋಕ್ ನಾಯ್ಕ್, ಎಸ್.ರುದ್ರೇಗೌಡ, ಡಿ.ಎಸ್. ಅರುಣ್, ಜಿಲ್ಲಾ ಪಂಚಾಯಿತಿ ಸಿಇಓ ಎಂ.ಎಲ್. ವೈಶಾಲಿ, ಎಸ್.ಪಿ. ಲಕ್ಷ್ಮೀ ಪ್ರಸಾದ್ ಉಪಸ್ಥಿತರಿದ್ದರು.
https://www.suddikanaja.com/2021/05/30/bed-blocking-allegation-against-private-hospital/