2 ದಶಕ ಇತಿಹಾಸವಿರುವ ‘ಶಕ್ತಿ ದೇವತೆಗಳ ಸಮಾಗಮ’ ಕಾರ್ಯಕ್ರಮ, ಕೋಟೆ ಶ್ರೀ ಸೀತಾರಾಮಾಂಜನೇಯಸ್ವಾಮಿ ದೇವಸ್ಥಾನದಲ್ಲಿ ಭಕ್ತರೋ ಭಕ್ತರು

 

 

ಸುದ್ದಿ ಕಣಜ.ಕಾಂ | DISTRICT | RELIGIOUS 
ಶಿವಮೊಗ್ಗ: ನಗರದ ಕೋಟೆ ಶ್ರೀ ಸೀತಾರಾಮಾಂಜನೇಯಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಅತ್ಯಂತ ವಿಜೃಂಬಣೆಯಿಂದ ಶಕ್ತಿ ದೇವತೆಗಳ ಸಮಾಗಮ ಕಾರ್ಯಕ್ರಮ ನಡೆಯಿತು. ಸಾವಿರಾರು ಭಕ್ತರು ಪಾಲ್ಗೊಂಡು ದೇವತೆಗಳ ದರ್ಶನ ಪಡೆದು ಪುನಿತರಾದರು.

ಕಳೆದ 22 ವರ್ಷಗಳಿಂದ ನಿರಂತರವಾಗಿ ಆಯೋಜಿಸಿಕೊಂಡು ಬಂದಿರುವ ಈ ಕಾರ್ಯಕ್ರಮ 23ನೇ ವರ್ಷಕ್ಕೆ ಕಾಲಿಟ್ಟಿದ್ದು, 45ಕ್ಕೂ ಅಧಿಕ ಶಕ್ತಿ ದೇವತೆಗಳು ಭಾಗವಹಿಸಿದ್ದು ವಿಶೇಷವಾಗಿತ್ತು.
Kote anjaneya 1

ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಕಾರ್ಯಕ್ರಮ
ಶಕ್ತಿ ದೇವತೆಗಳ ಸಮಾಗಮ ಸಮಿತಿಯು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಗ್ದಗುರು ಅನಂತ ಶ್ರೀ ವಿಭೂಷಿತ ಶ್ರೀ ಶಿವಸುಜ್ಞಾನ ತೀರ್ಥ ಮಹಾಸ್ವಾಮಿಗಳು, ಕಾಶಿಮಠ ಸಾವಿತ್ರಿ ಪೀಠದ ಶತ ಶ್ರೀ ಶಂಕರಾತ್ಮಾನಂದ ಸರಸ್ವತಿ ಮಹಾಸ್ವಾಮಿಗಳು ಸೇರಿದಂತೆ ಹಲವು ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಸಮಿತಿಯ ಪ್ರಮುಖ ದೀನ್ ದಯಾಳ್, ವಿಹಿಂಪ ಉತ್ತರ ಪ್ರಾಂತ್ಯದ ಸಂಚಾಲಕ ಮುನಿಯಪ್ಪ ಉಪಸ್ಥಿತರಿದ್ದರು.

error: Content is protected !!