ಸುದ್ದಿ ಕಣಜ.ಕಾಂ | DISTRICT | REPUBLIC DAY
ಶಿವಮೊಗ್ಗ: ಜಿಲ್ಲಾ ನೂತನ ಉಸ್ತುವಾರಿ ಸಚಿವಯೂ ಆದ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಕೆ.ಸಿ.ನಾರಾಯಣಗೌಡ ಅವರು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದರು.
ನಗರದ ಡಿಎಆರ್ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿವಮೊಗ್ಗದ ಅಭಿವೃದ್ಧಿಯ ಬಗ್ಗೆ ಮಾತನಾಡಿದರು.
ಟಾಪ್ 5 ಪಾಯಿಂಟ್
- ಜಿಲ್ಲೆಯಲ್ಲಿ ಕೈಗಾರಿಕೆ, ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಿ ಸಂಪರ್ಕ ರಸ್ತೆಗಳು, ಸೇತುವೆಗಳು, ನೂತನ ರೈಲು ಮಾರ್ಗ ವಿಮಾನ ನಿಲ್ದಾಣ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವ ಪಣ ತೊಡಲಾಗಿದೆ.
- ಜಿಲ್ಲೆಯ 6 ತಾಲೂಕುಗಳ ಕ್ರೀಡಾಂಗಣಗಳನ್ನು ಅಭಿವೃದ್ಧಿಪಡಿಸಲು ಕ್ರಮಕ ಕೈಗೊಳ್ಳಲಾಗಿದೆ. ಕುಸ್ತಿ ಮತ್ತು ವಾಲಿಬಾಲ್ ಕ್ರೀಡಾಪಟುಗಳಿಗಾಗಿ ಹಾಸ್ಟೆಲ್ ಗಳನ್ನು ಈ ವರ್ಷದಿಂದ ಶಿವಮೊಗ್ಗ ನಗರದಲ್ಲಿ ಆರಂಭ
- ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಸ್ವಚ್ಚ ಭಾರತ ಪರಿಕಲ್ಪನೆ ಅಡಿ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಘನತ್ಯಾಜ್ಯ ನಿರ್ವಹಣೆ ಘಟಕ ಆರಂಭಿಸಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ 5.29 ಕೋಟಿ ವೆಚ್ಚದಲ್ಲಿ 4,409 ಶೌಚಾಲಯಗಳನ್ನು ನಿರ್ಮಿಸಲಾಗಿದೆ.
- ಜಿಲ್ಲೆಯಲ್ಲಿ ಬಸವ ವಸತಿ ಯೋಜನೆ ಅಡಿ 6,451 ಮನಡಗಳು ಮತ್ತು ಅಂಬೇಡ್ಕರ್ ವಸತಿ ಯೋಜನೆಯಡಿ 1,989 ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಅಮೃತ ವಸತಿ ಯೋಜನೆ ಅಡಿ 27 ಗ್ರಾಪಂಗಳಲ್ಲಿ ಸ್ವತಂ ಮನೆ ಇಲ್ಲದ ಎಲ್ಲ ಫಲಾನುಭವಿಗಳಿಗೆ ಮನೆ ನೀಡುವ ಯೋಜನೆ ರೂಪಿಸಲಾಗಿದೆ.
- ಶಿವಮೊಗ್ಗ ನಗರಕ್ಕೆ 104 ಕೋಟಿ ರೂಪಾಯಿ ವೆಚ್ಚದಲ್ಲಿ 24/7 ನಿರಂತರ ಕುಡಿಯುವ ನೀರು ಪೂರೈಸುವ ಯೋಜನೆ ಹಾಗೂ ಮಹಾನಗರ ಪಾಲಿಕೆ ಹೊರವಲಯದಲ್ಲಿರುವ ಬಡಾವಣೆಗಳಿಗೆ ಕುಡಿಯುವ ನೀರು ಪೂರೈಸುವ 96.50 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳಿಗೆ ಈಗಾಗಲೇ ಚಾಲನೆ ನೀಡಲಾಗಿದ್ದು, ಕಾಮಗಾರಿಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಲಾಗುವುದು.
ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಎಂಎಲ್.ಸಿ ಎಸ್.ರುದ್ರೇಗೌಡ, ಮೇಯರ್ ಸುನೀತಾ ಅಣ್ಣಪ್ಪ, ಪ್ರಮುಖರಾದ ಎಸ್.ದತ್ತಾತ್ರಿ, ಸುರೇಖಾ ಮುರುಳೀಧರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
https://www.suddikanaja.com/2021/09/28/silk-shops-open-in-airports/