ಶಿವಮೊಗ್ಗದಲ್ಲಿ ನಡೆಯಲಿದೆ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ, ಯಾರು ಭಾಗವಹಿಸಲಿದ್ದಾರೆ? 

 

 

ಸುದ್ದಿ ಕಣಜ.ಕಾಂ | KARNATAKA | POLITICAL NEWS
ಶಿವಮೊಗ್ಗ: ನಗರದ ಶುಭಮಂಗಳ ಸಮುದಾಯ ಭವನದಲ್ಲಿ ಜನವರಿ 4ರಂದು ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ಕಾರ್ಯಕಾರಿಣಿ ಸಭೆ ಆಯೋಜಿಸಲಾಗಿದೆ ಎಂದು ರಾಜ್ಯ ಒಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುರೇಶ್ ಬಾಬು ತಿಳಿಸಿದರು.
ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರು ತಿಂಗಳಿಗೊಮ್ಮೆ ಕಾರ್ಯಕಾರಿಣಿ ಸಭೆ ರಾಜ್ಯದಾದ್ಯಂತ ನಡೆಯುತ್ತಿವೆ. ಈ ಸಲ ಶಿವಮೊಗ್ಗದಲ್ಲಿ ಏರ್ಪಡಿಸಲಾಗಿದೆ ಎಂದು ಹೇಳಿದರು.

ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ಒಂಭತ್ತಕ್ಕೂ ಹೆಚ್ಚು ಮಂಡಲಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ. ಈ ಸಭೆ ಅನೇಕ ನಿರ್ಧಾರಗಳನ್ನು ಕೈಗೊಳ್ಳಲಿದೆ. ಇದು ಐತಿಹಾಸಿಕ ಕಾರ್ಯಕಾರಿಣಿ ಸಭೆ ಆಗಲಿದೆ.
– ಸಿ.ಎಚ್. ಮಾಲತೇಶ್, ಜಿಲ್ಲಾ ಅಧ್ಯಕ್ಷ, ಒಬಿಸಿ ಮೋರ್ಚಾ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಭೆಯನ್ನು ಉದ್ಘಾಟಿಸಲಿದ್ದಾರೆ. ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತಿತರ ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಜನವರಿ 4 ರಂದು ಸಂಜೆ ಪದಾಧಿಕಾರಿಗಳ ಸಭೆ, 5ರಂದು ಬೆಳಗ್ಗೆ 10 ಗಂಟೆಗೆ ಕಾರ್ಯಕಾರಿಣಿ ಸಭೆ ನಡೆಯುವುದು ಎಂದರು.

Suಕಾಂಗ್ರೆಸ್ ಪಕ್ಷವು ಒಬಿಸಿಯನ್ನು ವೋಟ್ ಬ್ಯಾಂಕ್ ಗೋಸ್ಕರ ಮಾತ್ರ ಬಳಸಿಕೊಂಡಿದೆ. ಈ ಸಮುದಾಯವನ್ನು ಜೀತದಾಳುಗಳಂತೆ ಬಳಸಿಕೊಂಡಿದೆ. ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಒಬಿಸಿಯಲ್ಲಿ ಸೇರುವ ಎಲ್ಲ ಸಮುದಾಯಗಳಿಗೆ ಸಿಗಬೇಕೆನ್ನುವುದು ಬಿಜೆಪಿಯ ಉದ್ದೇಶವಾಗಿದೆ ಎಂದರು.

ರಾಜ್ಯ ಉಪಾಧ್ಯಕ್ಷ ಅಶೋಕ್ ಮೂರ್ತಿ, ಒಬಿಸಿ ಮೋರ್ಚಾ ನಗರಾಧ್ಯಕ್ಷ ಜಗದೀಶ್, ಪ್ರಮುಖರಾದ ಕೆ.ವಿ. ಅಣ್ಣಪ್ಪ, ಹಿರಣ್ಣಯ್ಯ, ಪ್ರಭಾಕರ್, ಕುಮಾರ್ ಮುಂತಾದವರಿದ್ದರು.

https://www.suddikanaja.com/2021/07/02/states-do-not-have-the-authority-to-declare-obc-sc-said/

error: Content is protected !!