ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ನಗರ ಉಪ ವಿಭಾಗ 2ರ ಘಟಕ 6ರ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಯುಜಿ ಕೇಬಲ್ ಕಾಮಗಾರಿ ಕೈಗೊಳ್ಳುವುದರಿಂದ ಜನವರಿ 30ರಂದು ಬೆಳಗ್ಗೆ 9ರಿಂದ ಸಂಜೆ 6ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
READ | ಶಿವಮೊಗ್ಗದಲ್ಲಿ ಒಂದೇ ದಿನ ಕೊರೊನಾಗೆ ಮೂವರ ಸಾವು
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ
ಗಾಜನೂರು ರೂರಲ್, ಹಾಯ್ ಹೊಳೆ, ಅನುಪಿನಕಟ್ಟೆ, ಗೋವಿಂದಾಪುರ, ಅಗಸವಳ್ಳಿ, ಕಲ್ಲೂರು, ರಾಮಿನಕೊಪ್ಪ, ಪುರದಾಳು, ಹನುಮಂತಾಪುರ, ಶಾರದ ಕಾಲೋನಿ, ಶರಾವತಿನಗರ, ಗೋಪಿಶೆಟ್ಟಿಕೊಪ್ಪ, ಮೇಲಿನ ತುಂಗಾನಗರ, ಕೆಳಗಿನ ತುಂಗಾನಗರ, ಚಾಲುಕ್ಯನಗರ, ಇಲಿಯಾಸ್ ನಗರ 1 ರಿಂದ 14ನೇ ತಿರುವಿನವರೆಗೆ, ಖಾಜಿನಗರ, ಮಂಜುನಾಥ ಬಡಾವಣೆ, ಕೆ.ಎಚ್.ಬಿ.ಕಾಲೋನಿ, ಸಿದ್ದೇಶ್ವರ ಸರ್ಕಲ್, 100 ಅಡಿರಸ್ತೆ, ಮಂಡ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಜ.31ರಂದು ಪವರ್ ಕಟ್
ಎಂ.ಆರ್.ಎಸ್. ವಿದ್ಯುತ್ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಕೈಗೊಳ್ಳುವುದರಿಂದ ಜ.31ರಂದು ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ಸುಬ್ಬಯ್ಯ ಆಸ್ಪತ್ರೆ, ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ಹಾರೊಬೆನವಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರ ಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಬೆಕ್ಕಿನಕಲ್ಮಠ, ಅಬ್ಬರಘಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವ್ಯತ್ಯಯವಾಗಲಿದೆ.
https://www.suddikanaja.com/2021/07/03/accused-arrested-5/