ಸುದ್ದಿ ಕಣಜ.ಕಾಂ | DISTRICT | SECTION 144
ಶಿವಮೊಗ್ಗ: ಜಿಲ್ಲೆಯ ಪ್ರೌಢ ಶಾಲೆಗಳ ಸುತ್ತ ನಿಷೇಧಾಜ್ಞೆ ಹೇರಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ತಿಳಿಸಿದ್ದಾರೆ.
ಹಿಜಾಬ್, ಕೇಸರಿ ಶಾಲು ವಿವಾದ ಹಿನ್ನೆಲೆ ಇತ್ತೀಚೆಗೆ ಉಂಟಾಗಿದ್ದ ಗಲಾಟೆ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.
VIDEO REPORT | ಶಿವಮೊಗ್ಗದಲ್ಲಿ ಖಾಕಿ ರೌಂಡ್ಸ್, ಶಿವಮೊಗ್ಗದಲ್ಲಿ ಶಾಲೆಗಳ ಪುನರಾರಂಭದ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದೇನು?
READ | ಹಿಜಾಬ್, ಕೇಸರಿ ಶಾಲು ಸಂಘರ್ಷ, ಶಿವಮೊಗ್ಗದಲ್ಲಿ 55ಕ್ಕೂ ಅಧಿಕ ಜನ ಮೇಲೆ ಕೇಸ್
ಸೋಮವಾರದಿಂದ ಪ್ರೌಢ ಶಾಲೆಗಳು ಪುನರಾರಂಭವಾಗಲಿದ್ದು, ಶಾಲೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಸೋಮವಾರ ಬೆಳಗ್ಗೆ 6 ಗಂಟೆಯಿಂದ 144 ಸೆಕ್ಷನ್ ಅಡಿ ನಿಷೇಧಾಜ್ಞೆಯನ್ನು ವಿಧಿಸಲಾಗಿದೆ.
10ನೇ ತರಗತಿವರೆಗೆ ಶಾಲೆಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಚಟುವಟಿಕೆಗಳ ಸುಗಮ ನಿರ್ವಹಣೆಗಾಗಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಪೂಹಾಪೋಹಗಳಿಗೆ ಕಿವಿಗೊಡದಿರಲು ಮನವಿ
ಪ್ರೌಢ ಶಾಲೆಗಳ ಆವರಣದಿಂದ 200 ಮೀಟರ್ ಒಳಗಡೆ ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಯಾವುದೇ ಊಹಾಪೋಹಗಳಿಗೆ ಕಿವಿಗೊಡದೆ, ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಹೋಗಲು ಜಿಲ್ಲಾಡಳಿತದೊಂದಿಗೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
https://www.suddikanaja.com/2022/02/07/hijab-saffron-controversy-has-begun-in-shimoga-the-clash-between-students-of-sahyadri-college-atncc-and-tirthahalli-government-degree-college-on-monday/