ಸುದ್ದಿ ಕಣಜ.ಕಾಂ | CITY | CURFEW
ಶಿವಮೊಗ್ಗ: ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಫೆಬ್ರವರಿ 26ರ ಬೆಳಗ್ಗೆ 9 ಗಂಟೆಯವರೆಗೆ ಕರ್ಫ್ಯೂ ಅನ್ನು ವಿಸ್ತರಿಸಲಾಗಿದೆ.
ನಗರದ ಸದ್ಯದ ಸ್ಥಿತಿಯನ್ನು ಅವಲೋಕಿಸಿ ನಗರ ವ್ಯಾಪ್ತಿಯೊಳಗೆ ಕರ್ಫ್ಯೂ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಬುಧವಾರ ತಿಳಿಸಿದ್ದಾರೆ. ಸೋಮವಾರ ಸಣ್ಣಪುಟ್ಟ ಅಹಿತಕರ ಘಟನೆಗಳು ನಡೆದಿರುವುದರಿಂದ ಭದ್ರತೆ ದೃಷ್ಟಿಯಿಂದ ಕರ್ಫ್ಯೂ ವಿಸ್ತರಣೆ ಮಾಡಲಾಗಿದೆ.
READ | ಭಜರಂಗ ದಳ ಕಾರ್ಯಕರ್ತ ಹರ್ಷ ಕೊಲೆ ಕೇಸ್, ಆರು ಜನರ ಬಂಧನ
ಯಾವುದಕ್ಕೆ ನಿರ್ಬಂಧ ಇರಲಿದೆ?
ಈ ಅವಧಿಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಸಾರ್ವಜನಿಕರು ಅನಗತ್ಯವಾಗಿ ಓಡಾಡುವಂತಿಲ್ಲ. ಅಂಗಡಿಗಳನ್ನು ತೆರೆಯುವುದಕ್ಕೆ ಅವಕಾಶ ಇರುವುದಿಲ್ಲ. ಸಭೆ, ಸಮಾರಂಭಗಳನ್ನು ಮಾಡುವಂತಿಲ್ಲ. ಮಾರಕಾಸ್ತ್ರಗಳನ್ನು ತೆಗೆದುಕೊಂಡು ಓಡಾಡುವಂತಿಲ್ಲ. ಹಾಲು ದಿನಸಿ, ತರಕಾರಿ ಅಂಗಡಿಗಳು ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 8 ಗಂಟೆಯವರೆಗೆ ತೆರೆಯಲು ಅವಕಾಶ ನೀಡಲಾಗಿದೆ.