ಸುದ್ದಿ ಕಣಜ.ಕಾಂ | DISTRICT | JOB JUNCTION
ಶಿವಮೊಗ್ಗ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಕ್ಕೆ ಅತಿಥಿ ಉಪನ್ಯಾಸಕರ (ಪಿಟಿಸಿ ಪ್ರಯೋಗಾಲಯ) ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬಿ.ಇ/ ಎಂ.ಟೆಕ್(ಮೆಕ್ಯಾನಿಕಲ್ ಐ/ಪಿ) ಕೈಗಾರಿಕಾ ಕ್ಷೇತ್ರದಲ್ಲಿ ಎರಡು ವರ್ಷಗಳ ಕ್ಯಾಡ್ ಮತ್ತು ಕ್ಯಾಮ್ ನಲ್ಲಿ ಅನುಭವ ಹೊಂದಿರಬೇಕು. ಅಭ್ಯರ್ಥಿಗಳ ವಯೋಮಿತಿ ಗರಿಷ್ಠ 32 ಇದ್ದು ಈ ಹಿಂದೆ ಅರ್ಜಿ ಸಲ್ಲಿಸಿದವರಿಗೆ ಪುನಃ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.
ಮಾರ್ಚ್ 22 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂಬರ್ ಸಿಎ 38, ನಿದಿಗೆ ಇಂಡಸ್ಟ್ರಿಯಲ್ ಏರಿಯಾ, ಮಾಚೇನಹಳ್ಳಿ, ಶಿವಮೊಗ್ಗ 577222, ದೂ.ಸಂ: 08182-246054 ನ್ನು ಸಂಪರ್ಕಿಸಬಹುದೆಂದು ಜಿಟಿಟಿಸಿ ಪ್ರಾಂಶುಪಾಲರು ತಿಳಿಸಿದ್ದಾರೆ.