ಸುದ್ದಿ ಕಣಜ.ಕಾಂ | CITY | CURFEW
ಶಿವಮೊಗ್ಗ: ನಗರದಲ್ಲಿ ಕರ್ಫ್ಯೂ ಅವಧಿಯಲ್ಲಿ ಸಡಿಲಿಕೆ ಮಾಡಲಾಗಿದ್ದು, ಫೆಬ್ರವರಿ 26ರ ಬೆಳಗ್ಗೆ 4 ಗಂಟೆಯವರೆಗೆ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದ್ದಾರೆ.
READ | ಶಿವಮೊಗ್ಗದಲ್ಲಿ ಶಾಲಾ ಕಾಲೇಜು ಪುನಾರಂಭಕ್ಕೆ ಡೇಟ್ ಫಿಕ್ಸ್
ಶಾಲಾ ಕಾಲೇಜುಗಳ ರಜೆ ವಿಸ್ತರಣೆ
ನಗರದಲ್ಲಿ ಶನಿವಾರ ಸಹ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ಸೋಮವಾರದಿಂದ ಶಾಲಾ- ಕಾಲೇಜು ಪುನರಾರಂಭಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೇ ಶಾಂತಿ ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಅವರು ಕೋರಿದ್ದಾರೆ.