ಶಿವರಾತ್ರಿಯಂದು ಹರಕೆರೆ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನ ಪ್ರವೇಶ ನಿಷೇಧ

ಸುದ್ದಿ ಕಣಜ.ಕಾಂ | CITY | SHIVARATRI 
ಶಿವಮೊಗ್ಗ: ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲಾಡಳಿತವು ಕಫ್ರ್ಯೂ ವಿಧಿಸಿರುವುದರಿಂದ ಶಿವರಾತ್ರಿಯಂದು (ಮಾರ್ಚ್ 1) ಹರಕೆರೆ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ ಎಂದು ದೇವಸ್ಥಾನ ಸೇವಾ ಸಮಿತಿ ತಿಳಿಸಿದೆ.

READ | ಪಿಯುಸಿ, ಡಿಪ್ಲೊಮಾ, ಪದವಿ ಪಾಸ್ ಆದವರಿಗೆ ಶಿವಮೊಗ್ಗದಲ್ಲಿ ಉದ್ಯೋಗ, ಅರ್ಹತೆಗಳೇನು?

ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಶಿವರಾತ್ರಿಯಂದು ದೇವಸ್ಥಾನಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಹೀಗಾಗಿ, ಸಾರ್ವಜನಿಕರು, ಭಕ್ತಾದಿಗಳು ಸಹಕರಿಸಬೇಕಾಗಿ ಮನವಿ ಮಾಡಿದ್ದಾರೆ.