ಇಂದು ಪಲ್ಸ್ ಪೋಲಿಯೋ ಲಸಿಕೆ, ಕರ್ಫ್ಯೂ ನಡುವೆ ಎಲ್ಲೆಲ್ಲಿ ಲಸಿಕಾಕರಣ, ಇಲ್ಲಿದೆ ಮಾಹಿತಿ

ಸುದ್ದಿ ಕಣಜ.ಕಾಂ | DISTRICT | PULSE POLIO
ಶಿವಮೊಗ್ಗ: ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣ ಇಲಾಖೆಯು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ರೋಟರಿ ಸಂಸ್ಥೆ ಶಿವಮೊಗ್ಗ ಪೂರ್ವ ಹಾಗೂ ಎಲ್ಲ ಸರ್ಕಾರೇತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಫೆಬ್ರವರಿ 27 ರಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

READ | ಭಜರಂಗ ದಳ ಕಾರ್ಯಕರ್ತ ಹರ್ಷನ ಮನೆಗೆ ಸ್ವಾಮೀಜಿಗಳ ಭೇಟಿ, ಸಂತರ ನಡೆಗೆ ಸಾಂತ್ವನದ ಕಡೆಗೆ

ಜಿಲ್ಲೆಯಾದ್ಯಂತ 0-5 ವರ್ಷದ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ತುಂಗಾನಗರದ ನಗರ ಪ್ರಸೂತಿ ಕೇಂದ್ರದಲ್ಲಿ ಫೆ.27 ರಂದು ಬೆಳಗ್ಗೆ 8 ಗಂಟೆಗೆ ಲಸಿಕೆಯ ಚಾಲನಾ ಕಾರ್ಯಕ್ರಮ ಆಯೋಜಿಸಲಾಗಿದೆ.
ಫೆ.27ರಿಂದ ತಾಲೂಕುವಾರು ಲಸಿಕೆ
ಫೆ. 27 ರಿಂದ ಮಾರ್ಚ್ 2ರ ವರೆಗೆ ಭದ್ರಾವತಿ, ತೀರ್ಥಹಳ್ಳಿ, ಸಾಗರ, ಶಿಕಾರಿಪುರ, ಸೊರಬ, ಹೊಸನಗರ ತಾಲೂಕುಗಳು ಹಾಗೂ ಶಿವಮೊಗ್ಗ ಗ್ರಾಮಾಂತರ ಪ್ರದೇಶದಲ್ಲಿ ಲಸಿಕೆ ಹಾಕಲಾಗುವುದು.
ಶಿವಮೊಗ್ಗ ನಗರದಲ್ಲಿ ಸೆಕ್ಷನ್ 144 ಅನ್ವಯ ಪ್ರತಿಬಂಧಕ ಕಾಯ್ದೆ ಜಾರಿಯಲ್ಲಿರುವುದರಿಂದ ಫೆ. 27ರಂದು ನಗರದಲ್ಲಿರುವ ನಗರ ಆರೋಗ್ಯ ಕೇಂದ್ರಗಳಲ್ಲಿ ಮಾತ್ರ ಲಸಿಕೆ ನೀಡಲಾಗುವುದು. ಪುನಃ ಮಾ.6 ರಿಂದ ನಗರದಲ್ಲಿರುವ ಎಲ್ಲ ಲಸಿಕಾ ಕೇಂದ್ರಗಳಲ್ಲಿ ನೀಡಿ ಮಾ. 7 ರಿಂದ 9 ರವರೆಗೆ ಮನೆ ಮನೆ ಭೇಟಿ ಸಮೀಕ್ಷೆಯನ್ನು ಹಮ್ಮಿಕೊಳ್ಳಲಾಗುವುದು. ಈ ಕಾರ್ಯಕ್ರಮದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.

ಮುನ್ಸೂಚನೆ ನೀಡದೇ ಕಬ್ಬಿಣದ ದರ ಏರಿಕೆ, ರೊಚ್ಚಿಗೆದ್ದ ವೆಲ್ಡಿಂಗ್ ಅಸೋಸಿಯೇಶನ್