ಸುದ್ದಿ ಕಣಜ.ಕಾಂ
ಶಿವಮೊಗ್ಗ: ಭಜರಂಗ ದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ.
RELATED NEWS
- ಅಂಗಡಿಗಳ ಮೇಲೆ ಕಲ್ಲು ತೂರಾಟ, ಶಿವಮೊಗ್ಗದಲ್ಲಿ ಉದ್ವಿಗ್ನ ಸ್ಥಿತಿ, ಶವಯಾತ್ರೆ ವೇಳೆ ಗಲಾಟೆ
- ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ, ಪರಿಸ್ಥಿತಿ ತಹಬದಿಗೆ ಐಜಿ ದೌಡು
- ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ
- ನಾಳೆ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ
- ಶಿವಮೊಗ್ಗ ನಗರದಾದ್ಯಂತ ಖಾಕಿ ಹೈ ಅಲರ್ಟ್, ಕೆಲವೆಡೆ ಲಘು ಲಾಠಿ ಪ್ರಹಾರ
ಎಂಜಿನಿಯರ್ ಒಬ್ಬರ ಹತ್ತಿರ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಕುಂಬಾರ ಬೀದಿ ನಿವಾಸಿ ಹರ್ಷ(28) ಅವರು ಊಟಕ್ಕೆ ಬಂದಾಗ ಭಾನುವಾರ ರಾತ್ರಿ ಕೊಲೆ ಮಾಡಲಾಗಿದ್ದು, ತಕ್ಷಣ ಕಾರ್ಯಗತಗೊಂಡಿರುವ ಪೊಲೀಸ್ ಇಲಾಖೆ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಆದರೆ, ಇದುವರೆಗೆ ಇಲಾಖೆ ಹೆಸರುಗಳನ್ನು ಬಹಿರಂಗ ಪಡಿಸಿಲ್ಲ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿಎಂ ಖಡಕ್ ವಾರ್ನಿಂಗ್
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಆರೋಪಿಗಳನ್ನು ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಜೊತೆಗೆ, ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
https://www.suddikanaja.com/2021/10/05/fraud-by-a-persons/