ಹಿಜಾಬ್ ವಿವಾದ, ಶಿವಮೊಗ್ಗದಲ್ಲಿ ಲಾಠಿ ಚಾರ್ಜ್, ಕಲ್ಲು ತೂರಾಟ, ಉದ್ವಿಗ್ನ ಸ್ಥಿತಿ, ಸ್ಥಳದಲ್ಲೇ ಬೀಡು ಬಿಟ್ಟ ಡಿಸಿ, ಎಸ್‍ಪಿ

 

 

ಸುದ್ದಿ ಕಣಜ.ಕಾಂ | DISTRICT | CRIME NEWS
ಶಿವಮೊಗ್ಗ: ಹಿಜಾಬ್-ಕೇಸರಿ ವಿವಾದ ತಾರಕಕ್ಕೇರಿದ್ದು, ಬಾಪೂಜಿ ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಲ್ಲು ತೋರಾಟ ನಡೆದಿದ್ದು, ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಈ ಘಟನೆಯಲ್ಲಿ ಕೆಲವು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಪರಿಸ್ಥಿತಿ ಉದ್ವಿಗ್ನವಾಗಿದೆ.
ವಿದ್ಯಾರ್ಥಿಗಳು ಕಾಲೇಜಿಗೆ ಪ್ರವೇಶಿಸಿ ಧ್ವಜ ಸ್ತಂಭಕ್ಕೆ ಕೇಸರಿ ಧ್ವಜವನ್ನು ಏರಿಸಲಾಯಿತು. ಬೆಳಗ್ಗೆಯಿಂದ ಕಾಲೇಜುಗಳು ಯಥಾ ಪ್ರಕಾರ ನಡೆಯುತ್ತಿದ್ದವು. ಆದರೆ, ಏಕಾಏಕಿ ಸ್ಥಳಕ್ಕೆ ದೌಡಾಯಿಸಿದ ಹಲವರು ಪ್ರಥಮ ದರ್ಜೆ ಕಾಲೇಜಿಗೆ ನುಗ್ಗಲು ಯತ್ನಿಸಿದ್ದಾರೆ. ಅದಕ್ಕೆ ಪೊಲೀಸರು ತಡೆಯಲು ಯತ್ನಿಸಿದ್ದಾರೆ. ಆಗ ರೊಚ್ಚಿಗೆದ್ದು ಕಾಲೇಜಿನ ಮೇಲೆ ಕಲ್ಲು ತೂರಾಟ ಮಾಡಲಾಗಿದೆ.

VIDEO REPORT

READ | ಹಿಜಾಬ್-ಕೇಸರಿ ಶಾಲು ಸಂಘರ್ಷ, ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ, ಇಂದು ಎಲ್ಲೆಲ್ಲಿ ಏನೇನಾಯ್ತು?

ಬಿ.ಎಚ್.ರಸ್ತೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಕೆಲವು ಮುಸ್ಲಿಂ ವಿದ್ಯಾರ್ಥಿಗಳು ನುಗ್ಗಲು ಯತ್ನಿಸಿದ್ದಾರೆ. ಆಗ ಪೊಲೀಸರು ಗೇಟ್ ಮುಚ್ಚಿ ತಡೆಯಲು ಮುಂದಾಗಿದ್ದಾರೆ. ಆದರೆ, ಭಾರಿ ಸಂಖ್ಯೆಯಲ್ಲಿ ಜನ ಸಮೂಹವಿದ್ದುದ್ದರಿಂದ ಪೊಲೀಸರು ತಡೆಯಲು ಸಾಧ್ಯವಾಗಲಿಲ್ಲ. ಹೀಗಾಗಿ, ಗೇಟ್ ತೆರೆದು ಒಳಗೆ ಪ್ರವೇಶಿಸಿದ ವಿದ್ಯಾರ್ಥಿಗಳು, ಕಾಲೇಜು ಆವರಣದಲ್ಲಿ ಘೋಷಣೆಗಳನ್ನು ಕೂಗಿದ್ದಾರೆ.
ಬಿ.ಎಚ್.ರಸ್ತೆಯಲ್ಲಿ ಉದ್ವಗ್ನ ಸ್ಥಿತಿ
ಬಿ.ಎಚ್.ರಸ್ತೆಯಲ್ಲಿ ವಿದ್ಯಾರ್ಥಿಗಳು, ಮುಸ್ಲಿಂ ಸಮಾಜದವರು ಪ್ರತಿಭಟನೆಗಿಳಿದಿರುವುದರಿಂದ ರಸ್ತೆಯನ್ನೇ ಬಂದ್ ಮಾಡಲಾಗಿದೆ. ಪೊಲೀಸರನ್ನು ತಡೆದು ಅವರೊಂದಿಗೆ ಜಗಳವಾಡಿದ ಘಟನೆಯೂ ನಡೆದಿದೆ. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸುವ ಕಾರಣಕ್ಕೆ ಬಾಪೂಜಿನಗರ ಫಸ್ಟ್ ಗ್ರೇಡ್ ಕಾಲೇಜು ಸಂಪರ್ಕ ರಸ್ತೆಯನ್ನು ಬಂದ್ ಮಾಡಿದ್ದಾರೆ.
ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಎಸ್.ಪಿ ಬಿ.ಎಂ.ಲಕ್ಷ್ಮೀಪ್ರಸಾದ್ ಸ್ಥಳಕ್ಕೆ ದೌಡಾಯಿಸಿದ್ದಾರೆ. ಬೆಳಗ್ಗೆಯಿಂದಲೇ ಇವರು ಇಲ್ಲಿಯೇ ಬೀಡು ಬಿಟ್ಟಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಮುಂದಾಗಿದ್ದಾರೆ.

https://www.suddikanaja.com/2021/11/22/rowdy-sheeter-bachan-arrested-by-shivamogga-police-at-bombay/

error: Content is protected !!