ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಗ್ರಿ ಪಾಸ್ ಆದವರಿಗೆ ಉದ್ಯೋಗ, ನೇರ ಸಂದರ್ಶನ ಮೂಲಕ ಆಯ್ಕೆ

 

 

ಸುದ್ದಿ ಕಣಜ.ಕಾಂ | KARNATAKA | JOB JUNCTION
ಮಂಗಳೂರು: ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(National Institute of Technology Karnataka)ನಲ್ಲಿ ನಾಲ್ಕು ಜೆಆರ್.ಎಫ್, ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ನಡೆಯಲಿದೆ. ಆಸಕ್ತರು ಮಾರ್ಚ್ 1ರಂದು ಬೆಳಗ್ಗೆ 9 ಗಂಟೆಗೆ ನಡೆಯಲಿರುವ ಸಂದರ್ಶನಕ್ಕೆ ಹಾಜರಾಗಬಹುದು.

JOBS FB Link

READ | ಪದವಿ ಪಾಸ್ ಆದವರಿಗೆ IISc ನಲ್ಲಿ ತಾಂತ್ರಿಕ ಸಹಾಯಕ ಹುದ್ದೆ ನೇಮಕಾತಿ, ಕೂಡಲೇ ಅರ್ಜಿ ಸಲ್ಲಿಸಿ
ವಿದ್ಯಾರ್ಹತೆ, ವೃತ್ತಿ ಅನುಭವ
ಫೆಬ್ರವರಿ 8ರಂದು ಅಧಿಸೂಚನೆ ಹೊರಡಿಸಿದ್ದು, ಜ್ಯೂನಿಯರ್ ರಿಸರ್ಚ್ ಫೆಲೋ (JRF) ಹುದ್ದೆಗೆ ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ ಎಂಜಿನಿಯರ್ ನಲ್ಲಿ ಬಿಇ ಅಥವಾ ಬಿಟೆಕ್ ಪೂರ್ಣಗೊಳಿಸಿರಬೇಕು. ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಎಸ್ಸೆಸ್ಸೆಲ್ಸಿ, ಪಿಯುಸಿ, ಬಿಕಾಂ ಪಾಸ್ ಆಗಿರಬೇಕು.
ಜೆಆರ್.ಎಫ್ ಗೆ ಹುದ್ದೆಗೆ ಅಭ್ಯರ್ಥಿಗಳು ಎಂಬ್ಯಾಡೆಡ್ ಎಂಜಿನಿಯರ್ ಆಗಿ ಕನಿಷ್ಠ 1 ವರ್ಷದ ವೃತ್ತಿ ಅನುಭವ ಹೊಂದಿರಬೇಕು. ಟೆಕ್ನಿಕಲ್ ಅಸಿಸ್ಟೆಂಟ್ ಗೆ ಸ್ಟೇಷನರಿ ಇಕ್ವಿಪ್ಮೆಂಟ್ ಮತ್ತು ಇನ್ ವೈಯಸ್ ಪೋಸ್ಟಿಂಗ್ ನಲ್ಲಿ ಕನಿಷ್ಠ 1 ವರ್ಷದ ಅನುಭವ ಇರತಕ್ಕದ್ದು.

READ | KPTCL ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಇಂದಿನಿಂದ ಆರಂಭ, ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಇನ್ ಸ್ಟಿಟ್ಯೂಟ್ ಹೆಸರು: ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (National Institute of Technology)
ಒಟ್ಟು ಹುದ್ದೆಗಳ ಸಂಖ್ಯೆ: 4
ಉದ್ಯೋಗ ಸ್ಥಳ: ಮಂಗಳೂರು
ಹುದ್ದೆಗಳು: ಜೆಆರ್.ಎಫ್ (JRF), ಟೆಕ್ನಿಕಲ್ ಅಸಿಸ್ಟೆಂಟ್ (Technical Assistant)
ವೇತನ: ಮಾಸಿಕ 16,000 ರೂಪಾಯಿ
ಅರ್ಜಿ ಸಲ್ಲಿಕೆ ವಿಧಾನ
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನಿಗದಿಪಡಿಸಿರುವ ದಿನಾಂಕದಂದು ಸೆಂಟರ್ ಫಾರ್ ಸಿಸ್ಟಂ ಡಿಸೈನ್, ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಸೂರತ್‍ಕಲ್, ಮಂಗಳೂರು 575025 ವಿಳಾಸಕ್ಕೆ ಸಂದರ್ಶಕ್ಕೆ ಹಾಜರಾಗತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಇಮೇಲ್- ಸಂಪರ್ಕಿಸಲು ಸೂಚಿಸಲಾಗಿದೆ.

ಹುದ್ದೆ ಹುದ್ದೆಗಳ ಸಂಖ್ಯೆ
ಜೆ.ಆರ್.ಎಫ್. 3
ಟೆಕ್ನಿಕಲ್ ಅಸಿಸ್ಟೆಂಟ್ 1

   NOTIFICATION

https://www.suddikanaja.com/2021/09/10/admission-for-technical-education/

error: Content is protected !!