ಶಿವಮೊಗ್ಗ ನಗರದಲ್ಲಿ ಎರಡು ದಿನ ಕರೆಂಟ್ ಇರಲ್ಲ

 

 

ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ಆಲ್ಕೋಳ ವಿದ್ಯುತ್ ವಿತರಣೆ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್ 5 ರಲ್ಲಿ ಸ್ಮಾರ್ಟ್‌ ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆಬ್ರವರಿ 23ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಗೋಪಾಲಗೌಡ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಆಲ್‍ ಹರೀಮ್ ಲೇಔಟ್, ಕೆ.ಎಚ್.ಬಿ. ಗೋಪಾಳ, ಕೆಎಚ್‍ಬಿ ಪ್ರೆಸ್ ಕಾಲೋನಿ, ಕೆಎಚ್‍.ಬಿ ಕಾಲೋನಿ, ಪೊಲೀಸ್ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

READ | ಭಜರಂಗ ದಳ ಕಾರ್ಯಕರ್ತ ಹರ್ಷ ಕೊಲೆ ಕೇಸ್, ಆರು ಜನರ ಬಂಧನ

ಫೆ.24ರಂದು ಪವರ್ ಕಟ್
ಫೆ.24 ರಂದು ಆಲ್ಕೋಳ ವಿದ್ಯುತ್ ವಿತರಣೆ ಕೇಂದ್ರದಿಂದ ಸರಬರಾಜಾಗುವ ಎಎಫ್ 11 ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ನಗರದ ಪೊಲೀಸ್ ಚೌಕಿ, ಚೇತನ ಪಾರ್ಕ್, ವಿನೋಬನಗರ ಚಾಚಾ ನೆಹರು ಪಾರ್ಕ್, ಮೋರ್ ಸೂಪರ್ ಮಾರ್ಕೆಟ್, ವಿನೋಬನಗರ ವಿಕಾಸ ಶಾಲೆ, ಡಿವಿಎಸ್ ಶಾಲೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

https://www.suddikanaja.com/2021/12/31/shivamogga-special-team-operations-cannabis-sale-four-accused-arrested-at-akola-village/

error: Content is protected !!