ಸುದ್ದಿ ಕಣಜ.ಕಾಂ | DISTRICT | JOB JUNCTION
ಶಿವಮೊಗ್ಗ: ತಾಲೂಕಿನ ಹೊಳಲೂರು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ `ಕಂಪ್ಯೂಟರ್ ಅಕೌಂಟಿಂಗ್ (ಟ್ಯಾಲಿ)’ ಕುರಿತು 30 ದಿನಗಳ ಉಚಿತ ತರಬೇತಿ ನೀಡಲಾಗುತ್ತಿದೆ. ಆಸಕ್ತ ನಿರುದ್ಯೋಗಿ ಮಹಿಳಾ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.
ಅಭ್ಯರ್ಥಿ ಹೊಂದಿರಬೇಕಾದ ಅರ್ಹತೆಗಳೇನು?
ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು. ಗ್ರಾಮೀಣ ಬಿಪಿಎಲ್ ಕಾರ್ಡ್ ಹೊಂದಿರಬೇಕು. ಉಚಿತ ತರಬೇತಿಯನ್ನು ಪಡೆದ ನಂತರ ಸ್ವಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಮತ್ತು ವಾಣಿಜ್ಯಶಾಸ್ತ್ರ ಪದವಿಧರರಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಲಾಗಿದೆ.
READ | ಎಸ್ಸೆಸ್ಸೆಲ್ಸಿ ಪಾಸ್ ಆದವರಿಗೆ ಶಿವಮೊಗ್ಗ ನ್ಯಾಯಾಲಯದಲ್ಲಿ ಸರ್ಕಾರಿ ನೌಕರಿ
ಇದೇ ತಿಂಗಳು ತರಬೇತಿ ಆರಂಭ
ತರಬೇತಿಯು ಮಾರ್ಚ್ 29ರಿಂದ ಪ್ರಾರಂಭವಾಗಲಿದ್ದು, ಕೆಲವೆ ಸೀಟುಗಳು ಬಾಕಿ ಇವೆ. ತರಬೇತಿಗೆ ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂಬರ್, ವಿದ್ಯಾರ್ಹತೆ ಮತ್ತು ವಯಸ್ಸಿನ ವಿವರಗಳನ್ನು ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ, ಹೊನ್ನಾಳಿ ರಸ್ತೆ, ಹೊಳಲೂರು-577 216 ಇಲ್ಲಿಗೆ ಕಳುಹಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 9481955721, 9743429595, 9449371579, 8660062683 ಅಥವಾ cbrsetiholalur@gmail.com ಸಂಪರ್ಕಿಸಬಹುದು.
https://www.suddikanaja.com/2021/03/10/opportunity-for-inter-corporation-transfer-in-ksrtc/