ಸುದ್ದಿ ಕಣಜ.ಕಾಂ | CITY | SAHYADRI COLLEGE
ಶಿವಮೊಗ್ಗ: ನಗರದ ಸಹ್ಯಾದ್ರಿ ಕಾಲೇಜು ವಾಟ್ಸಾಪ್ ಗ್ರೂಪ್ ನಲ್ಲಿ ಪಾಕಿಸ್ತಾನ ಧ್ವಜದ ಸ್ಟಿಕರ್ ಪೋಸ್ಟ್ ಮಾಡಿರುವ ಆರೋಪವನ್ನು ಕುವೆಂಪು ವಿವಿ ಕೂಡ ಗಂಭೀರವಾಗಿ ಪರಿಗಣಿಸಿದೆ.
READ | ಸಹ್ಯಾದ್ರಿ ಕಾಲೇಜು ವಾಟ್ಸಾಪ್ ಗ್ರೂಪಿನಲ್ಲಿ ಪಾಕ್ ಧ್ವಜದ ಸ್ಟೀಕರ್ ಪೋಸ್ಟ್, ಕ್ರಮಕ್ಕೆ ಎಬಿವಿಪಿ ಆಗ್ರಹ
ತನಿಖೆಗೆ ಕಾಲೇಜು ಮಟ್ಟದಲ್ಲಿ ಒಂದು ಸಮಿತಿಯನ್ನು ರಚಿಸಿದೆ. ಕಾನೂನು ಸಲಹೆಗಾರರು ಇದರಲ್ಲಿದ್ದಾರೆ ಎಂದು ಕುವೆಂಪು ವಿವಿಯ ಆಡಳಿತ ಅಧಿಕಾರಿಗಳು ತಿಳಿಸಿದ್ದಾರೆ.
ವಿದ್ಯಾರ್ಥಿಗಳ ವಿರುದ್ಧ ದೂರು
ಸಿಇಎನ್ ಠಾಣೆಗೆ ದೂರು ನೀಡಲಾಗಿದೆ. ಸಮಿತಿಯ ವರದಿಯನ್ನು ಪೊಲೀಸರಿಗೆ ಒಪ್ಪಿಸಲಾಗುವುದು ಎಂದು ತಿಳಿಸಿದ್ದಾರೆ.