ಸುದ್ದಿ ಕಣಜ.ಕಾಂ | TALUK | CRIME NEWS
ಭದ್ರಾವತಿ: ತಾಲೂಕಿನ ಹೊಳೆಹೊನ್ನೂರು ಬಳಿಯ ಎಮ್ಮೆಹಟ್ಟಿ ಗ್ರಾಮದಲ್ಲಿ ನವ ವಿವಾಹಿತೆಯೊಬ್ಬರು ಶುಕ್ರವಾರ ಮೃತಪಟ್ಟಿದ್ದದಾರೆ.
READ | KPSC Recruitment. ಪೊಲೀಸ್ ಇಲಾಖೆಯಲ್ಲಿ ‘ಎ’ ವೃಂದದ ಹುದ್ದೆಗಳ ನೇಮಕಾತಿ, ಕೂಡಲೇ ಅರ್ಜಿ ಸಲ್ಲಿಸಿ
ಎಮ್ಮೆಹಟ್ಟಿ ಗ್ರಾಮದ ಐಶ್ವರ್ಯ (18) ಮೃತರು. ಹರೀಶ್ ಎಂಬುವವರೊಂದಿಗೆ ವಿವಾಹವಾಗಿತ್ತು. ತೀವ್ರ ಹೊಟ್ಟೆ ನೋವಿನಿಂದ ಬಳಲುತಿದ್ದ ಯುವತಿಯನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿತ್ತು. ಆಹಾರ ವ್ಯತ್ಯಾಸದಿಂದಾಗಿ ಹೊಟ್ಟೆ ನೋವು ಕಾಣಿಸಿಕೊಂಡಿರುವುದಾಗಿ ಚಿಕಿತ್ಸೆ ನೀಡಿ ಕಳುಹಿಸಲಾಗಿತ್ತು. ಆದರೂ ನೋವು ಕಡಿಮೆ ಆಗಿರಲಿಲ್ಲ. ಹೀಗಾಗಿ, ಮಣಿಪಾಳ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.