ಸುದ್ದಿ ಕಣಜ.ಕಾಂ | DISTRICT | SCHOOL, COLLEGE HOLIDAY
ಶಿವಮೊಗ್ಗ: ಶಾಲಾ ಕಾಲೇಜುಗಳಲ್ಲಿ ಹಿಜಾಬ್ ವಿವಾದದ ಕುರಿತು ಮಾರ್ಚ್ 15ರಂದು ಹೈಕೋರ್ಟ್ ನಲ್ಲಿ ತೀರ್ಪು ಪ್ರಕಟವಾಗಿದೆ. ಈ ಹಿನ್ನೆಲೆ ಜಿಲ್ಲೆಯು ಮತೀಯವಾಗಿ ಸೂಕ್ಷ್ಮತೆಯಿಂದ ಕೂಡಿರುವ ಪ್ರದೇಶವಾಗಿದ್ದು, ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲೆಯಾದ್ಯಂತ ಮಾರ್ಚ್ 15ರ ಬೆಳಗ್ಗೆ 6 ಗಂಟೆಯಿಂದ ಮಾ.21ರ ರಾತ್ರಿ 10 ಗಂಟೆಯವರೆಗೆ ಕೆಳಕಂಡ ನಿಯಮಗಳನ್ನು ವಿಧಿಸಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.
READ | ಶಿವಮೊಗ್ಗ ಜಿಲ್ಲೆಯಾದ್ಯಂತ 144 ನಿಷೇಧಾಜ್ಞೆ ಜಾರಿ, ಶಾಂತಿ ಸುವ್ಯವಸ್ಥೆ ಕಾಪಾಡಲು ಜಿಲ್ಲಾಧಿಕಾರಿ ಮನವಿ
ನಿಬಂಧನೆಗಳೇನು?
- ಶಿವಮೊಗ್ಗ ಜಿಲ್ಲೆಯಾದ್ಯಂತ ಎಲ್ಲ ಶಾಲಾ, ಕಾಲೇಜುಗಳಿಗೆ ಮಾ.15ರಂದು ಮಾತ್ರ ರಜೆ ಘೋಷಣೆ
- ಶಾಲಾ ಕಾಲೇಜಿನ ಸಮವಸ್ತ್ರರ ವಿಚಾರವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಐದು ಮತ್ತು ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿರ್ಬಂಧಿಸಲಾಗಿದೆ.
- ಕೋರ್ಟ್ ತೀರ್ಪಿನ ವಿಚಾರವಾಗಿ ಯಾವುದೇ ರೀತಿಯ ಸಂಭ್ರಮಾಚರಣೆ ಅಥವಾ ಪ್ರತಿಭಟನೆಯನ್ನು ನಡೆಸುವಂತಿಲ್ಲ.
- ಶಾಲಾ ಕಾಲೇಜು ಆವರಣದ 200 ಮೀಟರ್ ವ್ಯಾಪ್ತಿಯಲ್ಲಿ ಶಾಲಾ ಕಾಲೇಜು ಸಿಬ್ಬಂದಿ, ಆಯಾ ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಬೇರೆ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಗುಂಪುಗೂಡುವುದನ್ನು ನಿರ್ಬಂಧಿಸಲಾಗಿದೆ
ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್, ಶಿಶುಪಾಲನಾ ರಜೆಗೆ ಗ್ರೀನ್ ಸಿಗ್ನಲ್