ಸುದ್ದಿ ಕಣಜ.ಕಾಂ | TALUK | DC VISIT
ಶಿವಮೊಗ್ಗ: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ- ಕಂದಾಯ ಇಲಾಖೆ ಎಂಬ ಹೊಸ ಪರಿಕಲ್ಪನೆಯಡಿ ಪ್ರತಿ ತಿಂಗಳ 3ನೇ ಶನಿವಾರದಂದು ಜಿಲ್ಲಾಧಿಕಾರಿಗಳು ಗ್ರಾಮ ಭೇಟಿ ನೀಡಿ ವಾಸ್ತವ್ಯ ಮಾಡಲಿದ್ದಾರೆ.
READ | ಮೂಗುಡ್ತಿಯಲ್ಲಿ ಸಕ್ರೆಬೈಲು ಗಜಪಡೆ ಮೊಕ್ಕಾಂ, 3 ಸಾಕಾನೆಗಳ ನೇತೃತ್ವದಲ್ಲಿ ಕೂಂಬಿಂಗ್
ಈ ಪರಿಕಲ್ಪನೆಯ ಅಂಗವಾಗಿ ಮಾರ್ಚ್ 19ರಂದು ಬೆಳಗ್ಗೆ 11 ಗಂಟೆಗೆ ತೀರ್ಥಹಳ್ಳಿ ತಾಲೂಕು ನೊಣಬೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ಜಿಲ್ಲಾಧಿಕಾರಿಗಳು ಕಂದಾಯ ಮತ್ತು ಇತರೆ ಎಲ್ಲಾ ಇಲಾಖೆಯ ಎಲ್ಲ ಅಧಿಕಾರಿ/ಸಿಬ್ಬಂದಿಯೊಂಂದಿಗೆ ಸಾರ್ವಜನಿಕರನ್ನು ಭೇಟಿ ಮಾಡಿ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ. ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡು, ಹಳ್ಳಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಈ ಗ್ರಾಮದ ಸಾರ್ವಜನಿಕರು ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ತಮ್ಮ ಅಹವಾಲುಗಳನ್ನು ಮುಂಚಿತವಾಗಿ ತಮ್ಮ ಗ್ರಾಮದಲ್ಲಿಯ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಿ, 19ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅಪರ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.