ಸುದ್ದಿ ಕಣಜ.ಕಾಂ | DISTRICT | CRIME NEWS
ಶಿವಮೊಗ್ಗ/ತೀರ್ಥಹಳ್ಳಿ: ಶಿರಿಗಾರುವಿನಿಂದ ಹೊಸ್ಕೇರಿ ಮತ್ತು ಅತ್ತಿಗಾರುಗೆ ಹೋಗುವ ರಸ್ತೆಯ ಪಕ್ಕದಲ್ಲಿ ಗುಂಡೇಟು ತಗುಲಿದ ಪರಿಣಾಮ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡರೊಬ್ಬರು ಶನಿವಾರ ಮೃತಪಟ್ಟಿದ್ದಾರೆ.
ಮೇಲಿನಕೊಪ್ಪ ಕಾಂತರಾಜು(40) ಎಂಬುವವರಿಗೆ ಗುಂಡೇಟು ತಗುಲಿದ್ದು, ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಶಿಕಾರಿಗೆ ತೆರಳಿದ್ದಾಗ ಘಟನೆ ಸಂಭವಿಸಿರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ.
ಕಾಂತರಾಜು ಅವರು 2015ರಿಂದ 18ರ ವರೆಗೆ ನೊಣಬೂರು ಗ್ರಾಪಂ ಅಧ್ಯಕ್ಷರಾಗಿದ್ದರು. ಗುಂಡು ಯಾರು ಹೊಡೆದಿದ್ದಾರೆ ಎಂಬ ಬಗ್ಗೆ ಇದುವರೆಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ.
ಅರಣ್ಯ ಪ್ರದೇಶದಲ್ಲಿ ರೋಧನೆ ಕೇಳಿ ಸಹಾಯ
ಅರಣ್ಯ ಪ್ರದೇಶದಲ್ಲಿ ಗುಂಡು ತಗುಲಿ ಕಾಂತರಾಜು ಅವರು ಕೂಗಾಡುತಿದ್ದಾಗ ದಾರಿಹೋಕರು ಅದನ್ನು ಕೇಳಿ ಸಹಾಯಕ್ಕೆ ಮುಂದಾಗಿದ್ದಾರೆ. ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ.
ಆಸ್ಪತ್ರೆಗೆ ಗೃಹ ಸಚಿವರ ದೌಡು
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಯ ಶವಾಗಾರದಲ್ಲಿ ಇರಿಸಿರುವ ಶವಾಗಾರಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭೇಟಿ ನೀಡಿದ್ದಾರೆ. ಕಾರ್ಯಕರ್ತರು ಮತ್ತು ಮುಖಂಡರಿಂದ ಈ ಕುರಿತು ಮಾಹಿತಿಯನ್ನೂ ಪಡೆದಿದ್ದಾರೆ. ಕಾಂತರಾಜು ಅವರ ಸಹೋದರ ಅವರು ತೀರ್ಥಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.