ಅರಣ್ಯ ಹಕ್ಕು ಕಾಯ್ದೆ ಬಗ್ಗೆ ನಡೀತು ಪ್ರಮುಖ ಸಭೆ, ಡಿಸಿ ನೀಡಿದ ಖಡಕ್ ವಾರ್ನಿಂಗ್‍ಗಳೇನು?

ಸುದ್ದಿ ಕಣಜ.ಕಾಂ | DISTRICT | DC MEETING
ಶಿವಮೊಗ್ಗ: ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸುದ್ದ ಜಿಲ್ಲಾಮಟ್ಟದ ಅರಣ್ಯ ಹಕ್ಕು ಸಮಿತಿ (forest rights committee) ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.

READ | ಭಾರತೀಪುರ ಕ್ರಾಸ್ ತಪ್ಪಿಸಲು ಅತ್ಯಾಧುನಿಕ ಮೇಲ್ಸೇತುವೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್, ಯಾವ ಕಾಮಗಾರಿಗೆಷ್ಟು ಅನುದಾನ

ಜಿಲ್ಲಾಧಿಕಾರಿ ನೀಡಿದ ಸೂಚನೆಗಳು

  • ಅರಣ್ಯ ಹಕ್ಕು ಕಾಯ್ದೆ ಅಡಿ ಬಾಕಿ ಉಳಿದಿರುವ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡಬೇಕು ಹಾಗೂ ತಿರಸ್ಕೃತಗೊಂಡ ಅರ್ಜಿಗಳನ್ನು ಮರು ಪರಿಶೀಲಸಿ ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕೆಂದು
  • ಅನುಸೂಚಿತ ಬುಡಕಟ್ಟುಗಳು ಮತ್ತು ಇತರೆ ಪಾರಂಪರಿಕ ಅರಣ್ಯವಾಸಿಗಳ ಅರಣ್ಯ ಹಕ್ಕುಗಳನ್ನು ಮಾನ್ಯ ಮಾಡುವ ಅಧಿನಿಯಮಗಳಡಿ ಸ್ವೀಕೃತವಾದ ಅರ್ಜಿಗಳನ್ನು ಸಂಬಂಧಿಸಿದ ಡಿಎಫ್‍ಓ ಗಳು ಮತ್ತು ಉಪವಿಭಾಗಾಧಿಕಾರಿಗಳು ನಿಯಮಿತವಾಗಿ ವಿಲೇವಾರಿ ಮಾಡಬೇಕು.
  • ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಗ್ರಾಮ ಅರಣ್ಯ ಹಕ್ಕು ಸಮಿತಿ ಹಾಗೂ ಉಪವಿಭಾಗ ಮಟ್ಟದ ಅರಣ್ಯ ಹಕ್ಕು ಸಮಿತಿಗಳಲ್ಲಿ ಯಲ್ಲಿ ಸಾಕಷ್ಟು ಅರ್ಜಿಗಳು ಬಾಕಿ ಇದ್ದು, ಅಧಿಕಾರಿಗಳು ಸಮನ್ವಯ ಸಾಧಿಸಿಕೊಂಡು ಅರ್ಜಿಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡಬೇಕು.

ಜಿಲ್ಲಾ ಅರಣ್ಯ ಹಕ್ಕು ಸಮಿತಿಯ ಸದಸ್ಯ ಕಾರ್ಯದರ್ಶಿಯಾದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕೆ.ಅಜ್ಜಪ್ಪ ಸಭೆಗೆ ಸಮಿತಿಯ ಪ್ರಗತಿ ಮಾಹಿತಿ ನೀಡಿದರು. ಸಾಗರ ಉಪವಿಭಾಗಾಧಿಕಾರಿ ನಾಗರಾಜ್, ಡಿಎಫ್‍ಓ ಗಳು, ತಹಸಿಲ್ದಾರ್, ಇಓ, ತಾಲ್ಲೂಕುಗಳ ಸಮಾಜ ಕಲ್ಯಾಣ ಅಧಿಕಾರಿಗಳು ಹಾಜರಿದ್ದರು.