ಸುದ್ದಿ ಕಣಜ.ಕಾಂ | DISTRICT | JOB JUNCTION
ಶಿವಮೊಗ್ಗ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಕ್ಕೆ ಅತಿಥಿ ಉಪನ್ಯಾಸಕರ (ಪಿಟಿಸಿ ಪ್ರಯೋಗಾಲಯ) ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಹೊಂದಿರಬೇಕಾದ ಅರ್ಹತೆ
ಬಿಇ/ಎಂ.ಟೆಕ್(ಮೆಕ್ಯಾನಿಕಲ್) ಕೈಗಾರಿಕಾ ಕ್ಷೇತ್ರದಲ್ಲಿ /ಕ್ಯಾಡ್ ಮತ್ತು ಕ್ಯಾಮ್ ನಲ್ಲಿ ಅನುಭವ ಹೊಂದಿರಬೇಕು. ಅಭ್ಯರ್ಥಿಗಳ ವಯೋಮಿತಿ ಗರಿಷ್ಠ 38 ವರ್ಷ ಇದ್ದು, ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸುವುದು ಅಥವಾ ತಿರಸ್ಕರಿಸುವುದು ಆಡಳಿತ ಮಂಡಳಿಯ ಪರಿಮಿತಿಗೆ ಒಳಪಟ್ಟಿರುತ್ತದೆ.
READ | ಶಿವಮೊಗ್ಗದಲ್ಲಿ ಮೈಕ್ರೋಬಯಾಲಜಿಸ್ಟ್ ಹುದ್ದೆ ಖಾಲಿ, ಅರ್ಹರು ಕೂಡಲೇ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಮಾರ್ಚ್ 30 ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ ಸಿಎ-38, ನಿದಿಗೆ ಇಂಡಸ್ಟ್ರ್ರೀಯಲ್ ಏರಿಯಾ, ಮಾಚೇನಹಳ್ಳಿ, ಶಿವಮೊಗ್ಗ 577 222, ದೂರವಾಣಿ ಸಂಖ್ಯೆ: 08182-246054 ನ್ನು ಸಂಪರ್ಕಿಸಬಹುದು ಎಂದು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.