ರಾಷ್ಟ್ರೀಯ ಶಿಕ್ಷಣ ಸಮಿತಿ, ನೂತನ ಅಧ್ಯಕ್ಷ, ಕಾರ್ಯದರ್ಶಿ ಇತರರ ಆಯ್ಕೆ, ಇಲ್ಲಿದೆ ಮಾಹಿತಿ

ಸುದ್ದಿ ಕಣಜ.ಕಾಂ | DISTRICT | EDUCATION CORNER
ಶಿವಮೊಗ್ಗ: ನಗರದ ಪ್ರತಿಷ್ಠಿತ ರಾಷ್ಟ್ರೀಯ ಶಿಕ್ಷಣ ಸಮಿತಿ (National Education Sociaty)ಯ ನೂತನ ಅಧ್ಯಕ್ಷರಾಗಿ ಸಹಕಾರಿ ತಜ್ಞ ಜಿ.ಎಸ್.ನಾರಾಯಣರಾವ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಎಂಪಿಎಂ ನಿವೃತ್ತ ಎಂಜಿನಿಯರ್ ಎಸ್.ಎನ್.ನಾಗರಾಜ್ ಮರು ಆಯ್ಕೆಯಾಗಿದ್ದಾರೆ.

READ | ಶಿವಮೊಗ್ಗದಲ್ಲಿ ನಾಗರಿಕರಿಗೆ GUN TRAINING CAMP, ಯಾವ ತಾಲೂಕಿನವರು ಅರ್ಜಿ ಸಲ್ಲಿಸಬಹುದು

ಬುಧವಾರ ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ 2022-27 ನೇ ಸಾಲಿನ ಪ್ರಥಮ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು.
ಉಪಾಧ್ಯಕ್ಷರಾಗಿ ಉದ್ಯಮಿ ಸಿ.ಆರ್.ನಾಗರಾಜ್, ಸಹ ಕಾರ್ಯದರ್ಶಿಯಾಗಿ ವೈದ್ಯ ಡಾ.ಪಿ.ನಾರಾಯಣ್, ಖಜಾಂಚಿ ಉದ್ಯಮಿ ಡಿ.ಜಿ.ರಮೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ 15 ಜನ ನಿರ್ದೇಶಕರಾಗಿ ಆಯ್ಕೆಯಾಗಿದ್ದರು.