ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ನಗರದ ಖಾಸಗಿ ಬಸ್ ನಿಲ್ದಾಣ ಸಮೀಪ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಯುವಕನೊಬ್ಬನನ್ನು ದೊಡ್ಡಪೇಟೆ ಪೊಲೀಸರು ಬಂಧಿಸಿದ್ದಾರೆ.
READ | ರಾತ್ರಿ ಇದ್ದ ಸಿಪ್ಪೆಗೋಟು ಅಡಿಕೆ ಬೆಳಗ್ಗೆ ನಾಪತ್ತೆ
ಜೆ.ಸಿ.ನಗರ ನಿವಾಸಿ ಅರ್ಬಾಜ್(21) ಬಂಧಿತ ಆರೋಪಿ. ಈತ ಬಸ್ ನಿಲ್ದಾಣ ಸಮೀಪದ ಓಡಾಡುತ್ತಿದ್ದ. ಆಗ ಗಸ್ತಿನಲ್ಲಿದ್ದ ಪೊಲೀಸರಿಗೆ ಈತನ ನಡತೆ ಅನುಮಾನಾಸ್ಪದವಾಗಿ ಕಂಡಿದೆ. ತಕ್ಷಣ ಆತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. ಆಗ ಗಾಂಜಾ ಸೇವಿಸಿರುವ ಅನುಮಾನ ಬಂದಿದೆ. ಹೀಗಾಗಿ, ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಆಗ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ತಕ್ಷಣ ಆತನನ್ನು ಬಂಧಿಸಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.