ಸಹ್ಯಾದ್ರಿ ಕಾಲೇಜು ವಾಟ್ಸಾಪ್ ಗ್ರೂಪ್‍ನಲ್ಲಿ ಪಾಕ್ ಧ್ವಜದ ಸ್ಟೀಕರ್ ಪೋಸ್ಟ್, ಕ್ರಮಕ್ಕೆ ಎಬಿವಿಪಿ ಆಗ್ರಹ

 

 

ಸುದ್ದಿ ಕಣಜ.ಕಾಂ | CITY | ABVP PROTEST
ಶಿವಮೊಗ್ಗ: ಸಹ್ಯಾದ್ರಿ ಕಾಲೇಜಿನ ವಾಟ್ಸಾಪ್ ಗ್ರೂಪ್ ನಲ್ಲಿ ಪಾಕಿಸ್ತಾನ ಧ್ವಜದ ಸ್ಟಿಕರ್ ಗಳನ್ನು ಪೋಸ್ಟ್ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಆಗ್ರಹಿಸಿದೆ.

READ | ಹರ್ಷ ಕೊಲೆ ಪ್ರಕರಣ ತನಿಖೆ ಇನ್ನಷ್ಟು ಟೈಟ್, ‘ಯುಎಪಿಎ’ ಕಾಯ್ದೆ ಎಂಟ್ರಿ, ಏನಿದು ಕಾಯ್ದೆ, ಇಲ್ಲಿದೆ ಕಂಪ್ಲೀಟ್ ರಿಪೋರ್ಟ್

ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರಿಗೆ ಮನವಿ ಪತ್ರ ಸಲ್ಲಿಸಿದ ಎಬಿವಿಪಿ ಕಾರ್ಯಕರ್ತರು, ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಥಮ ಬಿಸಿಎ ತರಗತಿಯ ವಾಟ್ಸಾಪ್ ಗ್ರೂಪ್ ನಲ್ಲಿ ಪಾಕಿಸ್ತಾನದ ಧ್ವಜದ ಸ್ಟಿಕರ್ ಗಳನ್ನು ಹಾಕುವುದರ ಮೂಲಕ ದೇಶ ದ್ರೋಹದ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.
ಪ್ರತಿಭಟನೆ ಮಾಡಿ ಕಾಲೇಜಿನ ಪ್ರಾಂಶುಪಾಲರಿಗೆ ಮನವಿ ಸಹ ಸಲ್ಲಿಸಲಾಗಿತ್ತು. ಆದರೆ ಕಾಲೇಜಿನ ಆಡಳಿತ ಮಂಡಳಿಯು ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ. ಎಬಿವಿಪಿ ಕಾರ್ಯಕರ್ತರು, ವಿದ್ಯಾರ್ಥಿಗಳು ಈ ವೇಳೆ ಉಪಸ್ಥಿತರಿದ್ದರು.

error: Content is protected !!