ಸುದ್ದಿ ಕಣಜ.ಕಾಂ | DISTRICT | JOB JUNCTION
ಶಿವಮೊಗ್ಗ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮಾರ್ಚ್ 12 ರಿಂದ 16ರ ವರೆಗೆ ಜಿಲ್ಲೆಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಉನ್ನತ ಶಿಕ್ಷಣ ಸಚಿವ ಸಿ.ಅಶ್ವಥ್ನಾರಾಯಣರವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಿಂದ ನಡೆದ ವಿಡಿಯೋ ಕಾನ್ಫರೆನ್ಸ್ ಬಳಿಕ ಜಿಲ್ಲಾಡಳಿತ ಕಚೇರಿಯಲ್ಲಿ ಪರೀಕ್ಷೆಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸುವ ಕುರಿತು ಸೂಚನೆಗಳನ್ನು ನೀಡಿದರು.
READ | Today Gold Rate ಬಂಗಾರದ ಬೆಲೆಯಲ್ಲಿ ದಾಖಲೆಯ ಏರಿಕೆ, 9 ದಿನಗಳ ರೇಟ್ ಇಲ್ಲಿದೆ
3,840 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ
ನಗರದ ಒಟ್ಟು 9 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಬೆಳಗ್ಗೆ ಮತ್ತು ಮಧ್ಯಾಹ್ನ ಎರಡು ಅವಧಿಯ ಪರೀಕ್ಷಾ ಅಧಿವೇಶನಗಳು ನಡೆಯಲಿವೆ. ಮಾ.12 ಮತ್ತು 13 ರಂದು ಎರಡೂ ಅಧಿವೇಶನ ಸೇರಿ ಒಟ್ಟು 3,840 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಮಾ.14 ರಂದು ಒಟ್ಟು 1512, ಮಾ.15 ರಂದು ಒಟ್ಟು 1920 ಹಾಗೂ ಮಾ.16 ರಂದು ಒಟ್ಟು 456 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.
ಎರಡು ತ್ರಿಸದಸ್ಯರ ಸಮಿತಿ ರಚನೆ
ಪ್ರತಿ ಕೇಂದ್ರಕ್ಕೆ ಒಬ್ಬ ವೀಕ್ಷಕರಂತೆ ಹಾಗೂ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳ ಬಂಡಲ್ಗಳನ್ನು ಸಂಬಂಧಪಟ್ಟ 9 ಪರೀಕ್ಷಾ ಕೇಂದ್ರಗಳಿಗೆ ನೀಡಲು ಎರಡು ತ್ರಿಸದಸ್ಯ ಸಮಿತಿ ರಚಿಸಲಾಗಿದೆ. ಪ್ರತಿ ಕೇಂದ್ರಗಳಲ್ಲಿ ಅಭ್ಯರ್ಥಿಗಳನ್ನು ತಪಾಸಣೆ ಮಾಡಲು ಒಬ್ಬ ಪುರುಷ ಮತ್ತು ಮಹಿಳಾ ಪೇದೆ ನೇಮಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು.
ಪ್ರತಿ ಕೇಂದ್ರಗಳಲ್ಲಿ ಸಿಸಿ ಟಿವಿ ಇದ್ದು, ಗೋಡೆ ಗಡಿಯಾರದ ವ್ಯವಸ್ಥೆ, ಶುದ್ದ ಕುಡಿಯುವ ನೀರು, ಉತ್ತಮ ಆಸನ ವ್ಯವಸ್ಥೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ ಅವರು ಕೇಂದ್ರದ ಮುಖ್ಯಸ್ಥರು, ವೀಕ್ಷಕರು, ಮಾರ್ಗಾಧಿಕಾರಿಗಳು, ಇನ್ವಿಜಿಲೇಟರ್ ಇತ್ಯಾದಿ ಅಧಿಕಾರಿಗಳು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ವಿವರಿಸಿ, ಹೆಚ್ಚಿನ ಕಾಳಜಿ ವಹಿಸಿ ಪರೀಕ್ಷಾ ಕರ್ತವ್ಯವನ್ನು ನಿರ್ವಹಿಸಬೇಕೆಂದು ತಿಳಿಸಿದರು.
READ | ಎಸ್ಸೆಸ್ಸೆಲ್ಸಿನಲ್ಲಿ ಪಾಸ್ ಆಗಿದ್ದರೆ ಸಾಕು ಬಿಎಂಟಿಸಿನಲ್ಲಿ ಉದ್ಯೋಗ, 300 ಹುದ್ದೆಗಳ ನೇಮಕಾತಿ
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು 144 ಸೆಕ್ಷನ್ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಎಡಿಸಿ ನಾಗೇಂದ್ರ ಹೊನ್ನಳ್ಳಿ, ಡಿವೈಎಸ್ಪಿ ಪ್ರಶಾಂತ್ ಮುನ್ನೊಳಿ, ಡಿಡಿಪಿಯು ನಾಗರಾಜ್ ಕಾಗಲ್ಕರ್, ಜಿಲ್ಲಾ ಖಜಾನಾಧಿಕಾರಿ ಎಂ.ಎಸ್. ಸಾವಿತ್ರಿ, ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.