ನಿಷೇಧಾಜ್ಞೆ ಹಿನ್ನೆಲೆ ಮಾ.14ರಂದು ನಡೆಯಬೇಕಿದ್ದ ಪರೀಕ್ಷೆ ಮುಂದೂಡಿಕೆ

 

 

ಸುದ್ದಿ ಕಣಜ.ಕಾಂ | DISTRICT | EDUCATION CORNER 
ಶಿವಮೊಗ್ಗ: ಹಿಜಾಬ್ ಕುರಿತು ರಾಜ್ಯ ಹೈಕೋರ್ಟ್ ಮಾರ್ಚ್ 14ರಂದು ತೀರ್ಪು ನೀಡಲಿದ್ದು, ಈ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯನ್ನು ಮುಂದೂಡಲಾಗಿದೆ. ನಾಳೆಯ ವಿಷಯಗಳ ಪರೀಕ್ಷೆಯ ದಿನಾಂಕವನ್ನು ಮುಂದೆ ತಿಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದ್ದಾರೆ.

READ | ಶಿವಮೊಗ್ಗ ಜಿಲ್ಲೆಯಾದ್ಯಂತ 144 ನಿಷೇಧಾಜ್ಞೆ ಜಾರಿ, ಶಾಂತಿ ಸುವ್ಯವಸ್ಥೆ ಕಾಪಾಡಲು ಜಿಲ್ಲಾಧಿಕಾರಿ ಮನವಿ

ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳ ಪರೀಕ್ಷೆ ಯಥಾಪ್ರಕಾರ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆ.ಇ.ಎ) ನಡೆಸುತ್ತಿರುವ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆ ಆಯ್ಕೆಯ ಪರೀಕ್ಷೆಗಳು ಮೊದಲೇ ನಿಗದಿಯಾದಂತೆ ಮೂರೂ ಕೇಂದ್ರಗಳಲ್ಲಿ ನಡೆಯಲಿವೆ.
ಶಿವಮೊಗ್ಗದ ಎಚ್.ಎಸ್.ಆರ್ ಪದವಿ ಪೂರ್ವ ಕಾಲೇಜು, ಸರಕಾರಿ ಪಪೂ ಕಾಲೇಜು, ಸರಕಾರಿ ಬಾಲಿಕಾ ಪದವಿ ಪೂರ್ವ ಕಾಲೇಜುಗಳಲ್ಲಿ ಪೂರ್ವ ನಿಗದಿಯಂತೆ ಪರೀಕ್ಷೆಗಳು ನಡೆಯಲಿವೆ ಎಂದು ಹೇಳಿದ್ದಾರೆ.

error: Content is protected !!