ಪ್ರೀತಿಸಿ ಮೋಸ ಮಾಡಿದ್ದಕ್ಕೆ ಯುವತಿ ಆತ್ಮಹತ್ಯೆ

 

 

ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: 34 ವರ್ಷದ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಪ್ರಿಯಕರ ಇನ್ನೊಬ್ಬಳೊಂದಿಗೆ ಮದುವೆಯಾಗುತ್ತಿದ್ದ ಕಾರಣಕ್ಕೆ ಪ್ರೇಯಸಿಯು ಭಾನುವಾರ ಸೀರೆಯಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮಾರ್ನಮಿಬೈಲು ನಿವಾಸಿ ಉಪನ್ಯಾಸಕ ವೃತ್ತಿ ಮಾಡುತ್ತಿರುವ ಮುರುಳಿ ಎಂಬಾತನೇ ಪ್ರೇಯಸಿಗೆ ವಿವಾಹವಾಗುವುದಾಗಿ ನಂಬಿಸಿ ನಂತರ ನಿರಾಕರಣೆ ಮಾಡಿದ್ದಾನೆ. ಇದರಿಂದ ಮನನೊಂದ ಯುವತಿಯು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ದೂರಿನಲ್ಲಿ ಮೃತಳ ಸಹೋದರ ದೂರು ನೀಡಿದ್ದಾರೆ.

READ | ತುಂಗಾ ನದಿಯ ತಟದಲ್ಲಿ 2 ಶವ ಪತ್ತೆ

ಕಾಲೇಜಿನಲ್ಲಿಯೇ ಪ್ರೇಮಾಂಕುರ
ಸಹ್ಯಾದ್ರಿ ಕಾಲೇಜಿನಲ್ಲಿ ಎಂಎ ವಿದ್ಯಾಭ್ಯಾಸ ಮಾಡುತ್ತಿದ್ದಾಗ ಇಬ್ಬರ ಪರಿಚಯವಾಗಿದೆ. ನಂತರ ಪ್ರೇಮಾಂಕುರವಾಗಿದೆ. ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಮದುವೆ ಆಗುವುದಾಗಿ ದೈಹಿಕ ಸಂಪರ್ಕವನ್ನೂ ಬೆಳೆಸಿದ್ದ ಎಂದು ದೂರಲಾಗಿದೆ. ದೊಡ್ಡಪೇಟೆ ಪೆÇಲೀಸ್ ಠಾಣೆಯಲ್ಲಿ ಐಪಿಸಿ ಕಲಂ 376, 306, 417, 114 ಸಹಿತ 34 ಅನ್ವಯ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗುತ್ತಿದೆ.

error: Content is protected !!