ಹರ್ಷ ಹಿಂದೂ ಹತ್ಯೆ ಪ್ರಕರಣದ ತನಿಖೆ ನಡೆಸಲಿದೆ ಎನ್.ಐ.ಎ

 

 

ಸುದ್ದಿ ಕಣಜ.ಕಾಂ | KARNATAKA | HARSHA MURDER CASE
ಶಿವಮೊಗ್ಗ: ಭಜರಂಗ ದಳ ಕಾರ್ಯಕರ್ತ ಹರ್ಷ ಹಿಂದೂ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್.ಐ.ಎ) ಮಾಡಲಿದೆ.
ಪ್ರಕರಣದಲ್ಲಿ ಬಂಧನಕ್ಕೆ ಒಳಪಟ್ಟಿರುವ ಆರೋಪಿಗಳ ವಿರುದ್ಧ ಕಾನೂನು ಬಾಗಿರ ಚಟುವಟಿಕೆಗಳ (ನಿರ್ಬಂಧ) ತಿದ್ದುಪಡಿ ಕಾಯ್ದೆ (ಯುಎಪಿಎ) ಪ್ರಕರಣ ದಾಖಲಿಸಲಾಗಿತ್ತು.

harsha NIA

ಪ್ರಕರಣದಲ್ಲಿ ಸಂಘಟನೆ ಶಾಮೀಲು ಆಗಿರುವ ಪ್ರಬಲವಾದ ಆರೋಪಗಳು ಕೇಳಿಬಂದಿದ್ದವು.
ಹರ್ಷನ ಶವ ಮೆರವಣಿಗೆ ನಂತರ ಸಂಜೆಯೇ ಸಚಿವ ಕೆ.ಎಸ್.ಈಶ್ವರಪ್ಪ ಅವರು ತನಿಖೆಯನ್ನು ಎನ್.ಐ.ಎಗೆ ವಹಿಸುವಂತೆ ಒತ್ತಾಯಿಸಿದ್ದರು. ಇದಾದ ಬಳಿಕ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಗೃಹ ವ್ಯವಹಾರಗಳ ಸಚಿವ ಅಮೀತ್ ಶಾ ಅವರಿಗೆ ಈ ಕುರಿತು ಪತ್ರ ಕೂಡ ಬರೆದಿದ್ದರು. ಅದಕ್ಕೆ ಶಾ ಸಕಾರಾತ್ಮಕ ಸ್ಪಂದನೆ ನೀಡಿದ್ದರು.
ಬೆಂಗಳೂರಿನಲ್ಲಿರುವ ಎನ್.ಐ.ಎ. ಕಚೇರಿಯಿಂದಲೇ ತನಿಖೆ ಕಾರ್ಯ ನಡೆಯಲಿದ್ದು, ಸ್ಥಳೀಯ ಪೊಲೀಸ್ ಅಧಿಕಾರಿಗಳು ಇದಕ್ಕೆ ಸಹಾಯ ಮಾಡಲಿದ್ದಾರೆ. ಇನ್ಮುಂದೆ ತನಿಖೆ ಇನ್ನಷ್ಟು ಚುರುಕುಗೊಳ್ಳುವ ಸಾಧ್ಯತೆ ಇದೆ.

error: Content is protected !!