ಜನ್ಮ ದಿನದಂದೇ ಶಪಥ ಮಾಡಿದ ಮಧು ಬಂಗಾರಪ್ಪ, ಹೇಳಿದ್ದೇನು?

 

 

ಸುದ್ದಿ ಕಣಜ.ಕಾಂ | DISTRICT | POLITICAL NEWS
ಶಿವಮೊಗ್ಗ: ನಗರದ ನಿವಾಸದಲ್ಲಿ ಬುಧವಾರ ಜನ್ಮ ದಿನಾಚರಣೆಯನ್ನು ಆಚರಿಸಿಕೊಂಡ ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಶಪಥ ಮಾಡಿದ್ದಾರೆ. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ.

READ | ಉಕ್ರೇನ್‍ನಿಂದ ಶಿವಮೊಗ್ಗಕ್ಕೆ ಸೇಫ್ ಆಗಿ ಮರಳಿದ ಮನೀಷಾ

ಮಧು ಬಂಗಾರಪ್ಪ ಹೇಳಿದ್ದೇನು?

  1. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದೇ ನಮ್ಮ ಗುರಿ. ಜೊತೆಗೆ, ರಾಜ್ಯ ಮತ್ತು ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟನೆ ಮಾಡಲಾಗುವುದು. ಎಲ್ಲ ಹಿರಿಯರ ಆಶಯವೂ ಇದೇ ಆಗಿದೆ.
  2. ನಮ್ಮ ತಂದೆ ಮಾಜಿ ಮುಖ್ಯಮಂತ್ರಿ ದಿ.ಎಸ್.ಬಂಗಾರಪ್ಪ ಅವರೇ ಹೇಳಿದಂತೆ ಸೋತು ರಾಜಕಾರಣ ಮಾಡುವುದು ಕೂಡ ಒಂದು ಪಾಠವಾಗುತ್ತದೆ. ನಾನು ತೆಗೆದುಕೊಂಡ ರಾಜಕೀಯ ನಿರ್ಧಾರ ಸರಿಯಾಗಿದೆ.
  3. ಬಗರ್ ಹುಕುಂ ಸಾಗುವಳಿದಾರರನ್ನು ಯಾವ ಕಾರಣಕ್ಕೂ ಒಕ್ಕಲೆಬ್ಬಿಸಲು ಬಿಡುವುದಿಲ್ಲ. ಅವರ ಪರವಾಗಿ ಶಾಸಕನಾಗಿದ್ದಾಗಲೂ ಹೋರಾಟ ಮಾಡಿದ್ದೇನೆ. ಈಗಲೂ ಮಾಡುವೆ. ಹಂತ ಹಂತವಾಗಿ ಸೊರಬದಿಂದಲೇ ಈ ಹೋರಾಟ ಆರಂಭಿಸಲಾಗುವುದು. ಇದು ರಾಜ್ಯದಾದ್ಯಂತ ವಿಸ್ತರಿಸಲಾಗುವುದು.
  4. ಸೊರಬದಲ್ಲಿ 7,200 ಅರ್ಜಿಗಳಿವೆ. ಹಲವು ಸಾವಿರ ಅರ್ಜಿಗಳು ತಿರಸ್ಕರಿಸಲ್ಪಟ್ಟಿವೆ. ಈಗಿನ ಬಿಜೆಪಿ ಸರ್ಕಾರ ಇದನ್ನು ಗಮನದಲ್ಲಿಟ್ಟುಕೊಂಡು ಕಾಯ್ದೆಗೆ ತಿದ್ದುಪಡಿ ತಂದು ಸಾಗುವಳಿದಾರರ ಹಿತ ಕಾಪಾಡಬಹುದಿತ್ತು. ಅದನ್ನು ಮಾಡಿಲ್ಲ.

ಈ ವೇಳೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್, ಮಾಜಿ ಶಾಸಕ ಆರ್. ಪ್ರಸನ್ನಕುಮಾರ್, ಪ್ರಮುಖರಾದ ಹುಲ್ತಿಕೊಪ್ಪ ಶ್ರೀಧರ್, ಬಂಡಿ ರಾಮಚಂದ್ರ, ಪಿ.ಒ.ಶಿವಕುಮಾರ್, ಶ್ವೇತಾ ಬಂಡಿ ಹಲವರು ಉಪಸ್ಥಿತರಿದ್ದರು.

https://www.suddikanaja.com/2021/08/05/grand-welcome-to-madhu-bangarappa-by-shivamogga-congress/

error: Content is protected !!