ಸುದ್ದಿ ಕಣಜ.ಕಾಂ | KARNATAKA | JOB JUNCTION
ಬೆಂಗಳೂರು: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್.ಎ.ಎಲ್) ಬೆಂಗಳೂರು ಇಲ್ಲಿ ಐಟಿಐ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಒಂದು ವರ್ಷದ ಅಪ್ರೆಂಟಿಸ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಫಿಟ್ಟರ್, ಟರ್ನರ್, ಮಷಿನಿಸ್ಟ್, ಎಲೆಕ್ಟ್ರಿಷಿಯನ್, ವೆಲ್ಡರ್, ಸಿಓಪಿಎ ಫೌಂಡ್ರಿಮನ್, ಶೀಟ್ ಮೆಟಲ್ ವರ್ಕರ್ ಒಟ್ಟು 1,060 ಹುದ್ದೆಗಳಿಗೆ ಅಪ್ರೆಂಟಿಸ್ ತರಬೇತಿ ನೀಡಲಾಗುವುದು. ಅಭ್ಯರ್ಥಿಯು ಎಸ್ಸೆಸ್ಸೆಲ್ಸಿ, ಐಟಿಐ ಅಂಕಪಟ್ಟಿಗಳು, ಜಾತಿ ಪ್ರಮಾಣ ಪತ್ರ, ಆಧಾರ್ ಮತ್ತು ಪಾನ್ ಕಾರ್ಡ್, ಎನ್.ಸಿವಿಟಿ ಪೋರ್ಟಲ್ ರಿಜಿಸ್ಟ್ರೇಷನ್ ನಂಬರ್, ಎಂಪ್ಲಾಯಿಮೆಂಟ್ ಕಾರ್ಡ್ ಮತ್ತು 4 ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಸಲ್ಲಿಸಬೇಕು.
READ | ಎನ್ಪಿಸಿಐಎಲ್ನಲ್ಲಿ 225 ಹುದ್ದೆಗಳ ನೇಮಕಾತಿ, ಕೂಡಲೇ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಕೆಗೆ ಏ.28 ಅಂತಿಮ ದಿನ
ಈ ಎಲ್ಲ ದಾಖಲೆಗಳ ಮೂಲ ಪ್ರತಿ ಹಾಗೂ 2 ಸೆಟ್ ನಕಲು ಪ್ರತಿಗಳನ್ನು ತೆಗೆದುಕೊಂಡು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಏಪ್ರಿಲ್ 28 ಕಡೆಯ ದಿನವಾಗಿದೆ.
ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ದೂರವಾಣಿ ಸಂಖ್ಯೆ: 08182-255293, 9482023412, 9535312531 ನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.