ಸುದ್ದಿ ಕಣಜ.ಕಾಂ | KARNATAKA | POLITICAL NEWS
ಶಿವಮೊಗ್ಗ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಏಪ್ರಿಲ್ 19ರಂದು ಜಿಲ್ಲೆಗೆ ಭೇಟಿ ನೀಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಮಂಗಳವಾರ ಬೆಳಗ್ಗೆ 8.30ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟಿದ್ದು, 9.50ಕ್ಕೆ ಶೃಂಗೇರಿಯ ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ. ಅಲ್ಲಿಂದ ಶ್ರೀ ಶಾರದಾಂಬ ದೇವಿಯ ದೇವಸ್ಥಾನಕ್ಕೆ ಭೇಟಿ ನೀಡುವರು. ಕೊಪ್ಪ ತಾಲೂಕಿನ ಹರಿಹರಪುರಕ್ಕೆ ಆಗಮಿಸಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು.
READ | ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್.ಯಡಿಯೂರಪ್ಪ, ಹೇಳಿದ್ದೇನು?
ಮಧ್ಯಾಹ್ನ 12 ಗಂಟೆಗೆ ಶಿವಮೊಗ್ಗಕ್ಕೆ ಆಗಮಿಸುವರು. ಏಪ್ರಿಲ್ 19 ಮತ್ತು 20ರಂದು ಹೋಟೆಲ್ ಹರ್ಷ ದ ಫರ್ನ್ ನಲ್ಲಿ ಬಿಜೆಪಿ ಪಕ್ಷದಿಂದ ಆಯೋಜಿಸಿರುವ ಸಭೆಗಳಲ್ಲಿ ಭಾಗವಹಿಸುವರು. ಶಿವಮೊಗ್ಗದಲ್ಲಿಯೇ ವಾಸ್ತವ್ಯ ಹೂಡುವರು.
21ರಂದು ಸರ್ಕ್ಯೂಟ್ ಹೌಸ್ ಹೆಲಿಪ್ಯಾಡ್ ನಿಂದ ಹೊರಟು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣಕ್ಕೆ ತಲುಪುವರು. ಏಪ್ರಿಲ್ 22ರಂದು ಕಲಬುರಗಿಯ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.