ಸುದ್ದಿ ಕಣಜ.ಕಾಂ | DISTRICT | JOB JUNCTION
ಶಿವಮೊಗ್ಗ: ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಮೇ 12 ರಿಂದ 14 ರವರೆಗೆ ಕೌಶಲಾಭಿವೃದ್ದಿ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ನವಿಲೆ ಕೃಷಿ ಮಹಾವಿದ್ಯಾಲಯದ ಕೃಷಿ ಡೀನ್ ತಿಳಿಸಿದ್ದಾರೆ.
READ | 4 ದಿನ ಶಿವಮೊಗ್ಗದಲ್ಲೇ ಇರಲಿದ್ದಾರೆ ಬಿ.ಎಸ್.ಯಡಿಯೂರಪ್ಪ, ಯಾವ್ಯಾವ ಕಾರ್ಯಕ್ರಮಗಳಲ್ಲಿ ಭಾಗಿ?
ಈ ತರಬೇತಿಯಲ್ಲಿ ಭಾಗವಹಿಸಲಿಚ್ಚಿಸುವವರು ತರಬೇತಿ ಶುಲ್ಕ ಪ್ರತಿ ದಿನ 100 ರೂಪಾಯಿಯಂತೆ ಮೂರು ದಿನಗಳಿಗೆ ಒಟ್ಟು 300 ರೂ.ಗಳನ್ನು ಪಾವತಿಸಿ ಮೇ 6ರೊಳಗೆ ದೂರವಾಣಿ ಮೂಲಕ ಅಥವಾ ಖುದ್ದಾಗಿ ಡಾ.ಶಿವಲೀಲಾ ಪಾಟೀಲ್, ಎಸ್.ಆರ್.ಎಫ್, ಕೃಷಿ ಮಹಾವಿದ್ಯಾಲಯ, ನವಿಲೆ, ಶಿವಮೊಗ್ಗ, ಮೊ.ಸಂ: 7411680410 ಇವರನ್ನು ಸಂಪರ್ಕಿಸಿ ಹೆಸರು ನೋಂದಾಯಿಸಬಹುದಾಗಿದೆ.
ಮೊದಲು ನೋಂದಾಯಿಸಿದ 12 ಜನರಿಗೆ ಮಾತ್ರ ಅವಕಾಶವಿದ್ದು, ತರಬೇತಿಗೆ ಕಡ್ಡಾಯವಾಗಿ ಆಧಾರ್ ಕಾರ್ಡ್ ತರಬೇಕು. 18 ರಿಂದ 35 ವಯಸ್ಸಿನೊಳಗಿನ ಜಿಲ್ಲೆಯ ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿರುತ್ತದೆ.