ಸುದ್ದಿ ಕಣಜ.ಕಾಂ | DISTRICT | EDUCATION CORNER
ಶಿವಮೊಗ್ಗ: ಮೂನ್ ಕಮಿಟಿ ಖುತುಬ್-ಎ-ರಂಜಾನ್ ಹಬ್ಬವನ್ನು ಮೇ 2ರಂದು ಆಚರಿಸಲು ನಿರ್ಣಯಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಾರ್ವತ್ರಿಕ ರಜೆ ಘೋಷಣೆ ಮಾಡಿರುವುದರಿಂದ ಸೋಮವಾರದಂದು ನಿಗದಿಯಾಗಿದ್ದ ಕುವೆಂಪು ವಿಶ್ವವಿದ್ಯಾಲಯದ ಎಲ್ಲ ಸ್ನಾತಕ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಅಂದು ನಡೆಯಬೇಕಿದ್ದ ಪರೀಕ್ಷೆಯ ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವ ಪ್ರೊ.ಎಸ್.ಕೆ.ನವೀನ್ ಕುಮಾರ್ ತಿಳಿಸಿದ್ದಾರೆ.