ಸುದ್ದಿ ಕಣಜ.ಕಾಂ | DISTRICT | DRIVING TRAINING
ಶಿವಮೊಗ್ಗ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಡಿ ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸೇರಿದ ಎಲ್ಲ ಅರ್ಹ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಗೆ ಉಚಿತವಾಗಿ ಲಘು ಮತ್ತು ಭಾರಿ ವಾಹನಗಳ ಚಾಲನಾ ತರಬೇತಿ ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
READ | ಹಿಂದೂ ಹರ್ಷ ಕೊಲೆ ಬಳಿಕ ಸಿದ್ಧವಾಗಿತ್ತು ಅನ್ಯಕೋಮಿನ ಯುವಕನ ಮರ್ಡರ್ ಗೆ ಸ್ಕೆಚ್
ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸು ತುಂಬಿರಬೇಕು. ಜನನ ಪ್ರಮಾಣ ಪತ್ರ ಅಥವಾ ಎಸ್ಸೆಸ್ಸೆಲ್ಸಿ ಅಂಕಪಟ್ಟಿ, ಶಾಲಾ ವರ್ಗಾವಣಾ ಪತ್ರ(ಟಿ.ಸಿ), ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಪಾಸ್ ಪೋರ್ಟ್ ಅಳತೆಯ 5 ಭಾವಚಿತ್ರಗಳನ್ನು ಸಲ್ಲಿಸಬೇಕಾಗುತ್ತದೆ.
ಭಾರಿ ವಾಹನ ಚಾಲನಾ ತರಬೇತಿಗೆ ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 20 ವರ್ಷ ವಯಸ್ಸಾಗಿರಬೇಕು. ಲಘು ವಾಹನ ಚಾಲನ ಅನುಜ್ಞಾಪತ್ರ ಪಡೆದು ಒಂದು ವರ್ಷ ಪೂರೈಸಿರಬೇಕು. ಜನನ ಪ್ರಮಾಣಪತ್ರ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಪಾಸ್‍ಪೋರ್ಟ್ ಅಳತೆಯ 5 ಭಾವಚಿತ್ರಗಳನ್ನು ನೀಡಬೇಕಾಗುತ್ತದೆ.
ಆಸಕ್ತ ಅಭ್ಯರ್ಥಿಗಳು www.karnataka.gov.in/kmvstdcl ವೆಬ್ ಸೈಟ್ ಮೂಲಕ ಏಪ್ರಿಲ್ 20ರ ಒಳಗೆ ಅರ್ಜಿ ಸಲ್ಲಿಸುವಂತೆ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಣೆಯಲ್ಲಿ ತಿಳಿಸಿದ್ದಾರೆ.
ಚಾಲನಾ ತರಬೇತಿಯನ್ನು ಬೆ.ಮ.ಸಾ.ಸಂಸ್ಥೆ ಕೇಂದ್ರ ವಡ್ಡರಹಳ್ಳಿ, ದಾಸನಪುರ ಹೋಬಳಿ ಬೆಂಗಳೂರು ಉತ್ತರದಲ್ಲಿ ನೀಡಲಾಗುವುದು. ಅರ್ಹ ಅಭ್ಯರ್ಥಿಗಳಿಗೆ 30 ದಿನಗಳ ತರಬೇತಿಯಲ್ಲಿ ವಸತಿ ಮತ್ತು ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-276776 ನ್ನು ಸಂಪರ್ಕಿಸುವುದು.