ಸುದ್ದಿ ಕಣಜ.ಕಾಂ | KARNATAKA | POLITICAL NEWS
ಶಿವಮೊಗ್ಗ: ಕರ್ನಾಟಕ ಪ್ರದಧೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಏಪ್ರಿಲ್ 5ರಂದು ಭದ್ರಾವತಿಗೆ ಆಗಮಿಸಲಿದ್ದಾರೆ ಎಂದು ಅವರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ.
READ | 5ಜಿ ಟಾವರ್ ಸ್ಥಾಪನೆ ಅಗ್ರಿಮೆಂಟ್ ಕಳುಹಿಸಿ ಲಕ್ಷಾಂತರ ರೂ. ಮೋಸ
ಅಂದು ಬೆಳಗ್ಗೆ 8.30ಕ್ಕೆ ಬೆಂಗಳೂರಿನಿಂದ ಹೊರಡಲಿರುವ ಅವರು 10.30ಕ್ಕೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿಗೆ ಆಗಮಿಸುವರು. ಅಲ್ಲಿ ಬಾಬು ಜಗಜೀವನ್ ರಾಂ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. 1.30ಕ್ಕೆ ಅಲ್ಲಿಂದ ಹೊರಡಲಿದ್ದಾರೆ. ರಸ್ತೆಯ ಮೂಲಕ ಮಧ್ಯಾಹ್ನ 3 ಗಂಟೆಗೆ ಭದ್ರಾವತಿಗೆ ಆಗಮಿಸುವರು. 3.30ಕ್ಕೆ ಭದ್ರಾವತಿಯಲ್ಲಿ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಎಲ್ಲ ವಿಧಾನಸಭೆ ಕ್ಷೇತ್ರಗಳ ಡಿಜಿಟಲ್ ಸದಸ್ಯತ್ವ ನೋಂದಣಿ ಅಭಿಯಾನದ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ. ಸಂಜೆ 4.30ಕ್ಕೆ ಭದ್ರಾವತಿಯಿಂದ ನಿರ್ಗಮಿಸಲಿದ್ದಾರೆ. ಅಂದು ರಾತ್ರಿ ಹಾಸನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಏಪ್ರಿಲ್ 6ರಂದು 11 ಗಂಟೆಗೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಗೆ ಆಗಮಿಸುವರು. 11.30ಕ್ಕೆ ಶ್ರೀ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ಕಲಶ ಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ 5ಕ್ಕೆ ನಿರ್ಗಮಿಸಿ 7.30ಕ್ಕೆ ಬೆಂಗಳೂರು ತಲುಪಲಿದ್ದಾರೆ.